ಕೊಪ್ಪಳ ಮೇ 01 (ಕರ್ನಾಟಕ ವಾರ್ತೆ): ಜಿಲ್ಲಾ ಚುನಾವಣಾಧಿಕಾರಿಗಳಾದ ಎಂ.ಸುಂದರೇಶಬಾಬು ಅವರು ಮೇ 1 ರಂದು ಕನಕಗಿರಿ ಕ್ಷೇತ್ರಕ್ಕೆ ಭೇಟಿ ನೀಡಿದ ವೇಳೆ ಕನಕಗಿರಿ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಚೆಕ್ ಪೋಸ್ಟಗಳ ಸಿಸಿಟಿವಿಯನ್ನು ಮತ್ತು ಸ್ಟ್ರಾಂಗ್ ರೂಂಗಳನ್ನು ಪರಿಶೀಲನೆ ಮಾಡಿದರು.
ಆರೋಗ್ಯ ತಪಾಸಣೆ ಹಾಗೂ ಶಿಶುಪಾಲನಾ ಕೊಠಡಿ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ 61-ಕನಕಗಿರಿ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಸಮೀರ್ ಮುಲ್ಲಾ ಸೇರಿದಂತೆ ತಹಶೀಲ್ದಾರರು, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳು, ಮುಖ್ಯಾಧಿಕಾರಿಗಳು ಸೇರಿದಂತೆ ಚುನಾವಣಾ ಸಿಬ್ಬಂದಿ ಹಾಜರಿದ್ದರು.