ಗಂಗಾವತಿ: ಕರ್ನಾಟಕ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕರಾದ ಶ್ರೀ ಗಾಲಿ ಜನಾರ್ಧನರೆಡ್ಡಿಯವರ ಆದೇಶದ ಮೇರೆಗೆ ಇಂದು ದಿನಾಂಕ: ೦೩.೦೫.೨೦೨೩ ರಂದು ಪಕ್ಷದ ಕಾರ್ಯಾಲಯದಲ್ಲಿ ರಾಜ್ಯ ಯುವ ಘಟಕದ ಪ್ರಧಾನ ಕಾರ್ಯದರ್ಶಿಯನ್ನಾಗಿ ರಾಜೇಶ ರೆಡ್ಡಿ ತಂ. ಸೋಮಪ್ಪ ಇವರನ್ನು ನೇಮಕ ಮಾಡಲಾಗಿದೆ ಎಂದು ಪಕ್ಷದ ರಾಜ್ಯ ಯುವಶಕ್ತಿ ಘಟಕದ ರಾಜ್ಯಾಧ್ಯಕ್ಷರಾದ ಭೀಮಾಶಂಕರ ಪಾಟೀಲ್ ಪ್ರಕಟಣೆಯಲ್ಲಿ ತಿಳಿಸಿದರು. ಅವರು ನೇಮಕಾತಿ ಪತ್ರ ನೀಡುವ ಸಂದರ್ಭದಲ್ಲಿ ಮಾತನಾಡುತ್ತಾ, ರಾಜ್ಯ ಮಟ್ಟದ ರಾಜಕೀಯ ಅನುಭವ, ಸಂಘಟನಾ ಶಕ್ತಿ ಹಾಗೂ ನಾಯಕತ್ವದ ಗುಣಗಳನ್ನು ಮೆಚ್ಚಿ ಈ ಜವಾಬ್ದಾರಿಯನ್ನು ನೀಡಲಾಗಿದೆ. ಪಕ್ಷಕ್ಕೆ ನಿಷ್ಠೆಯಿಂದ ಹಾಗೂ ಪ್ರಾಮಾಣಿಕತೆಯಿಂದ ನಿರ್ವಹಿಸಿ, ಪಕ್ಷವನ್ನು ಸಂಘಟಿಸಲು ಸಂಪೂರ್ಣವಾಗಿ ತೊಡಗಿಸಿಕೊಂಡು, ಪಕ್ಷದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಬೇಕೆಂದು ಕರೆನೀಡಿದರು. ಈ ಸಂದರ್ಭದಲ್ಲಿ ಪಕ್ಷದ ಕೊಪ್ಪಳ ಜಿಲ್ಲಾಧ್ಯಕ್ಷರಾದ ಮನೋಹರಗೌಡ ಹೇರೂರು, ಗಂಗಾವತಿ ನಗರ ಘಟಕದ ಅಧ್ಯಕ್ಷರಾದ ವೀರೇಶ ಬಲುಕುಂದಿ, ಗಂಗಾವತಿ ಗ್ರಾಮೀಣ ಘಟಕದ ಅಧ್ಯಕ್ಷರಾದ ದುರುಗಪ್ಪ ಆಗೋಲಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.