ಜೂಮ್ ಪ್ಲಸ್

ವಿಠಲಾಪುರ ಗ್ರಾಮಸ್ಥರ ಮನವೊಲಿಸಿದ ತಾಲೂಕು ಅಧಿಕಾರಿಗಳು

Published

on

ಗಂಗಾವತಿ:ಮತದಾನ ಬಹಿಷ್ಕಾರಕ್ಕೆ ಮುಂದಾಗಿದ್ದ ತಾಲೂಕಿನ ವಿಠಲಾಪುರ ಗ್ರಾಮಕ್ಕೆ ತಾಲೂಕು ಅಧಿಕಾರಿಗಳ ತಂಡ ಭಾನುವಾರ ಮಧ್ಯಾಹ್ನ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಸಭೆ ನಡೆಸಿ ಮನವೊಲಿಸಿದರು.

ಗ್ರಾಮಸ್ಥರ ಎಲ್ಲ ಬೇಡಿಕೆಗಳನ್ನು ಈಡೇರಿಸಿದ್ದರಿಂದ ಗ್ರಾಮಸ್ಥರು ಮತದಾನ ಮಾಡಲು ಒಪ್ಪಿಗೆ ನೀಡಿದರು. ವಿಧಾನಸಭಾ ಚುನಾವಣೆಯಲ್ಲಿ ಗ್ರಾಮದಲ್ಲಿ ಶೇ.100 ರಷ್ಟು ಮತ ಚಲಾಯಿಸುತ್ತೇವೆ ಎಂದು ಗ್ರಾಮಸ್ಥರು ಹೇಳಿದರು.

ತಹಸೀಲ್ದಾರರಾದ ಮಂಜುನಾಥ, ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಮಹಾಂತಗೌಡ ಪಾಟೀಲ್, ಸಣ್ಣ ನೀರಾವರಿ ಇಲಾಖೆ ಸಹಾಯಕ ನಿರ್ದೇಶಕರಾದ ಕೃಷ್ಣಮೂರ್ತಿ, ಇಂಜಿನಿಯರ್ ಶೇಲ್ವಕುಮಾರ್, ಕನಕಗಿರಿ ಪೊಲೀಸ್ ಠಾಣೆ ಸಿಪಿಐ, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು, ಗ್ರಾಮದ ಮುಖಂಡರು ಇದ್ದರು.

https://zoomkarnataka.com/wp-content/uploads/2023/05/VID-20230507-WA0433.mp4

Leave a Reply

Your email address will not be published. Required fields are marked *

Trending

Exit mobile version