ಕೊಪ್ಪಳ ಮೇ 09 (ಕ.ವಾ.): ಮತದಾನ ಮಾಡುವುದು ನಮ್ಮೆಲ್ಲರ ಹಕ್ಕಾಗಿದ್ದು, ಮೇ 10ರಂದು ಅರ್ಹ ಪ್ರತಿಯೊಬ್ಬರು ತಪ್ಪದೇ ಮತದಾನ ಮಾಡಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶಬಾಬು ಅವರು ಕೊಪ್ಪಳ ಜಿಲ್ಲೆಯ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ನಾವೆಲ್ಲರೂ ಪ್ರಜಾಪ್ರಭುತ್ವದಲ್ಲಿ ದೃಢವಿಶ್ವಾಸವುಳ್ಳವರಾಗಿದ್ದೇವೆ. ಮುಕ್ತ, ನ್ಯಾಯಸಮ್ಮತ ಮತ್ತು ಶಾಂತಿಯುತ ಚುನಾವಣೆಯು ಪ್ರಜಾಪ್ರಭುತ್ವದ ಘನತೆಯನ್ನು ಎತ್ತಿ ಹಿಡಿಯಲಿದೆ. ಅದ್ದರಿಂದ ಯಾರೇ ಇರಲಿ ಧರ್ಮ, ಜನಾಂಗ, ಜಾತಿ, ಮತ, ಭಾಷೆ ಅಥವಾ ಯಾವುದೇ ಪ್ರೇರೇಪಣೆಗಳ ದಾಕ್ಷಿಣ್ಯಗಳಿಂದ ಪ್ರಭಾವಿತರಾಗದೇ, ಯಾವುದೇ ಆಮೀಷಗಳಿಗೆ ಒಳಗಾಗದೇ ತಪ್ಪದೇ ಮತದಾನ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.