ಮನೋರಂಜನೆ

ಅಜಯ್ ರಾವ್ ಚಿತ್ರಕ್ಕೆ ಕೆಜಿಎಫ್ ನಟಿ ಅರ್ಚನಾ ಜೋಯಿಸ್ ನಾಯಕಿ

Published

on

ತಾಜ್ ಮಹಲ್, ಕೃಷ್ಣ ಲೀಲಾ, ಕೃಷ್ಣ ರುಕ್ಮಿಣಿ ಖ್ಯಾತಿಯ ನಟ ಅಜಯ್ ರಾವ್ ಇದೀಗ ಮತ್ತೊಂದು ಹೊಸ ಸಿನಿಮಾದಲ್ಲಿ ನಟಿಸುತ್ತಿದ್ದು, ಈ ಚಿತ್ರಕ್ಕೆ ಕೆಜಿಎಫ್ (KGF 2) ಖ್ಯಾತಿಯ ನಟಿ ಅರ್ಚನಾ ಜೋಯಿಸ್ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಈ ಚಿತ್ರಕ್ಕೆ ‘ಯುದ್ಧಕಾಂಡ’ ಎಂದು ಟೈಟಲ್ ಇಡಲಾಗಿದ್ದು, ಅಜಯ್ ರಾವ್ ತಮ್ಮದೇ ನಿರ್ಮಾಣ ಸಂಸ್ಥೆ ‘ಶ್ರೀಕೃಷ್ಣ ಆರ್ಟ್ಸ್ ಅಂಡ್ ಕ್ರಿಯೇಷನ್ಸ್’ ಮತ್ತು ‘ಅಜಯ್ ರಾವ್ ಪ್ರೊಡಕ್ಷನ್ಸ್’ ನಡಿ ನಿರ್ಮಾಣ ಮಾಡುತ್ತಿದ್ದಾರೆ.

‘ಯುದ್ಧಕಾಂಡ’ ಎಂದಾಗ ಎಲ್ಲರಿಗೂ ನೆನಪಾಗೋದು ಲೆಜೆಂಡರಿ ರವಿ ಸರ್ ಸಿನಿಮಾ. ಆ ಸಿನಿಮಾದ ನಿರ್ದೇಶಕರಾದ ಕೆ. ವಿ ರಾಜು ಸರ್ ಜೊತೆ ನಾನು ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕೆಲಸ ಮಾಡಿದ್ದೇನೆ ಅದು ನನ್ನ ಅದೃಷ್ಟ. ಈ ಸಿನಿಮಾ ಲಾಂಚ್ ಮಾಡೋವಾಗ ಮೊದಲು ರವಿ ಸರ್ ಭೇಟಿ ಮಾಡಿ ಆಶೀರ್ವಾದ ತೆಗೆದುಕೊಂಡು ಬಂದೆ. ಒಳ್ಳೆದಾಗ್ಲಿ ಎಂದು ಆಶೀರ್ವಾದ ಮಾಡಿದ್ರು. ಆದ್ರೆ ಆಗ ಬಂದ ‘ಯುದ್ಧಕಾಂಡ’ ಚಿತ್ರಕ್ಕೂ ಈ ಚಿತ್ರಕ್ಕೂ ಯಾವುದೇ ಸಂಬಂಧ ಇಲ್ಲ. ಇದು ರಿಮೇಕ್ ಸಿನಿಮಾ ಕೂಡ ಅಲ್ಲ ಎಂದು ಅಜಯ್ ರಾವ್ ಮಾಹಿತಿ ನೀಡುತ್ತಾರೆ.

‘ಚಿತ್ರರಂಗಕ್ಕೆ ಎಂಟ್ರಿ ಕೊಟ್ಟು 20 ವರ್ಷ ಆಯ್ತು. ನಟನಾಗಿ ಯಶಸ್ಸು, ಸೋಲು ಎರಡನ್ನು ನೋಡಿದ್ದೇನೆ. ಕೇವಲ ನಟನಾಗಿ ಉಳಿಯದೇ ಸಿನಿಮಾದ ಎಲ್ಲಾ ಕ್ಷೇತ್ರದಲ್ಲಿ ಪ್ರಯೋಗ ಮಾಡಬೇಕು ಎಂದುಕೊಂಡು ಬೆಂಗಳೂರಿಗೆ ಬಂದವನು ನಾನು.

ಹೀರೋ ಆಗಿದ್ದವನು ಕ್ಯಾರೆಕ್ಟರ್ ಆರ್ಟಿಸ್ಟ್ ಆಗಿಯೂ ಮಾಡಿದ್ದೇನೆ. ಕೃಷ್ಣ ಲೀಲಾ ಸಿನಿಮಾ ಮೂಲಕ ನಿರ್ಮಾಪಕನೂ ಆಗಿದ್ದೇನೆ. ಇದೀಗ ಏಳು ವರ್ಷದ ನಂತರ ಎರಡನೇ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದೇನೆ ಎನ್ನುವುದು ಅಜಯ್ ರಾವ್ ಮಾತು.

 ‘ಯುದ್ಧಕಾಂಡ’ ಸಿನಿಮಾವನ್ನು ಕಟಿಂಗ್ ಶಾಪ್ ಸಿನಿಮಾ ಖ್ಯಾತಿಯ ಪವನ್ ಭಟ್ ನಿರ್ದೇಶಿಸುತ್ತಿದ್ದಾರೆ. ಕಾರ್ತಿಕ್ ಶರ್ಮಾ ಕ್ಯಾಮೆರಾ ವರ್ಕ್, ಕೆ.ಬಿ.ಪ್ರವೀಣ್ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ‘ಯುದ್ಧಕಾಂಡ’ ಸಿನಿಮಾ ಈಗಾಗಲೇ ಶೇಕಡಾ 50 ರಷ್ಟು ಚಿತ್ರೀಕರಣ ಕೂಡ ಆಗಿದೆ.

Leave a Reply

Your email address will not be published. Required fields are marked *

Trending

Exit mobile version