ತಾಜಾ ಸುದ್ದಿ

ಬಿಜೆಪಿ ನಾಯಕರ ಭಾವ ಚಿತ್ರಕ್ಕೆ ಚಪ್ಪಲಿ ಹಾರ ಹಾಕಿದ ಪ್ರಕರಣ

Published

on

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್, ಡಿ.ವಿ. ಸದಾನಂದ ಗೌಡ ಅವ್ರ ಬ್ಯಾನರಿಗೆ ಚಪ್ಪಲಿ ಹಾರ ಹಾಕಿದ ಪ್ರಕರಣದಲ್ಲಿ ಬಂಧಿತರಾದ ಯುವಕರಿಗೆ ಪೊಲೀಸರು ಥರ್ಡ್ ಡಿಗ್ರಿ ಟ್ರೀಟ್ಮೆಂಟ್ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತಾದ ಫೋಟೋ ವೈರಲ್ ಆಗ್ತಿದೆ.

ಬೆನ್ನು, ಸೊಂಟದ ಹಿಂಭಾಗಕ್ಕೆ ಬಾಸುಂಡೆ ಬರುವ ರೀತಿ ಥಳಿಸಿದ್ದು, ಪೊಲೀಸರ ನಡೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಗ್ತಿದೆ. ಪೊಲೀಸ್ ಠಾಣೆಯಲ್ಲಿ ಆರೋಪಿಗಳನ್ನು ಕೂಡಿಹಾಕಿ ಆರೋಪಿತರಿಗೆ ತೀವ್ರವಾಗಿ ಥಳಿಸಲಾಗಿದೆ. ಬಿಜೆಪಿಯ ಕೆಲ ನಾಯಕರ ಒತ್ತಡಕ್ಕೊಳಗಾಗಿ ಪೊಲೀಸರು ಈ ರೀತಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಪೊಲೀಸರ ಕಿರುಕುಳದಿಂದ ಯುವಕರು ಎದ್ದು ನಡೆಯಲಾಗದ ಸ್ಥಿತಿಯಲ್ಲಿದ್ದಾರೆ. ಏಳು ಮಂದಿ ಬಿಜೆಪಿ ಕಾರ್ಯಕರ್ತರೇ ಪುತ್ತೂರಿನಲ್ಲಿ ಪಕ್ಷದ ಸೋಲಿನ ಬಗ್ಗೆ ಆಕ್ರೋಶಗೊಂಡು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮತ್ತು ಮಾಜಿ ಸಿಎಂ ಸದಾನಂದ ಗೌಡರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ, ಶ್ರದ್ಧಾಂಜಲಿ ಕೋರಿ ಬ್ಯಾನರ್ ಹಾಕಿದ್ದರು. ಪೊಲೀಸರು ತೀವ್ರ ರೀತಿಯ ಕಿರುಕುಳ, ಚಿತ್ರಹಿಂಸೆ ಕೊಟ್ಟಿದ್ದಾರೆ. ಪೊಲೀಸರ ಕಿರುಕುಳ ವಿಷಯ ತಿಳಿದು ಅರುಣ್ ಪುತ್ತಿಲ ಅವ್ರು ಕಾರ್ಯಕರ್ತರನ್ನು ಅವರ ಕೈಯಿಂದ ಬಿಡಿಸಿ ತಂದಿದ್ದಾರೆ.

ತಮ್ಮ ಪಕ್ಷದ ಕಾರ್ಯಕರ್ತರಿಗೇ ಈ ರೀತಿ ಪೊಲೀಸರ ಮೂಲಕ ಚಿತ್ರಹಿಂಸೆ ಕೊಡಿಸಿದ್ದು ಪುತ್ತೂರಿನಲ್ಲಿ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಪುತ್ತೂರಿನ ಬಿಜೆಪಿ ನಾಯಕರ ವಿರುದ್ಧ ಕಾರ್ಯಕರ್ತರ ಒಳಗಿನಿಂದಲೇ ಆಕ್ರೋಶದ ಕಟ್ಟೆಯೊಡೆದಿದೆ.

Leave a Reply

Your email address will not be published. Required fields are marked *

Trending

Exit mobile version