ರಾಜಕೀಯ

ಕರ್ನಾಟಕದ 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ನಾಳೆ ಕಂಠೀರವ ಸ್ಟೇಡಿಯಂನಲ್ಲಿ ಪ್ರಮಾಣವಚನ

Published

on

ಬೆಂಗಳೂರು: ಕರ್ನಾಟಕದ 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ನಾಳೆ ಕಂಠೀರವ ಸ್ಟೇಡಿಯಂನಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಅದ್ದೂರಿ ಪ್ರಮಾಣ ವಚನ ಸಮಾರಂಭಕ್ಕೆ ಕಾಂಗ್ರೆಸ್ ಹಲವು ವಿರೋಧ ಪಕ್ಷದ ನಾಯಕರಿಗೆ ಆಹ್ವಾನಿಸಿದೆ.ಹಾಲಿ ಕಾಂಗ್ರೆಸ್ ಮುಖ್ಯಮಂತ್ರಿಗಳಲ್ಲದೆ, ಸಮಾನ ಮನಸ್ಕ ಪಕ್ಷಗಳ ಪ್ರಮುಖ ನಾಯಕರನ್ನೂ ಆಹ್ವಾನಿಸಿದೆ.

ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್, ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್, ಛತ್ತೀಸ್‌ಗಢ ಸಿಎಂ ಭೂಪೇಶ್ ಬಾಘೇಲ್, ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಮತ್ತು ಹಿಮಾಚಲ ಪ್ರದೇಶ ಸಿಎಂ ಸುಖವಿಂದರ್ ಸಿಂಗ್ ಸುಖು ಅವರಿಗೆ ಆಹ್ವಾನವನ್ನು ನೀಡಲಾಗಿದೆ.

ಇದಲ್ಲದೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಮತ್ತು ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್ ಠಾಕ್ರೆ,ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್, ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಮತ್ತು ಒಡಿಶಾ ಸಿಎಂ ನವೀನ್ ಪಟ್ನಾಯಕ್ ಅವರನ್ನೂ ಆಹ್ವಾನಿಸಲಾಗಿದೆ.

ಇದಲ್ಲದೆ ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ,ರಾಹುಲ್ ಗಾಂಧಿ ಮತ್ತು ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಆಹ್ವಾನಿಸಲಾಗಿದೆ.

ಈ ಎಲ್ಲ ಸಿದ್ದರಾಮಯ್ಯನವರ ಪ್ರಮಾಣವಚನ ಸಮಾರಂಭಕ್ಕೆ ಸಾಕ್ಷಿಯಾಗಲಿದ್ದಾರೆ ಎನ್ನಲಾಗಿದೆ.ಆ ಮೂಲಕ ಮುಂದಿನ ಲೋಕಸಭೆ ಚುನಾವಣೆ ಹಿನ್ನೆಲೆ ಒಗ್ಗಟ್ಟಿನ ಸ್ಪಷ್ಟ ಸಂದೇಶ ಎನ್ ಡಿಎ ಮೈತ್ರಿಕೂಟಕ್ಕೆ‌ ನೀಡಲಿದ್ದಾರೆ ಎನ್ನಲಾಗಿದೆ.

Leave a Reply

Your email address will not be published. Required fields are marked *

Trending

Exit mobile version