ಹೈದರಾಬಾದ್: ತೆಲಂಗಾಣದ ಕೆಲವು ಭಾಗಗಳಲ್ಲಿ ಉಷ್ಣತೆ ಹೆಚ್ಚಿದ್ದು, ಬುಧವಾರ ಗರಿಷ್ಠ ತಾಪಮಾನ 46 ಡಿಗ್ರಿ ಸೆಲ್ಸಿಯಸ್ ದಾಟಿದೆ. ತೆಲಂಗಾಣ ರಾಜ್ಯ ಅಭಿವೃದ್ಧಿ ಯೋಜನಾ ಸೊಸೈಟಿ ಪ್ರಕಾರ, ಭದ್ರಾದ್ರಿ ಕೊತಗುಡೆಂ ಜಿಲ್ಲೆಯ ಜುಲುರ್‌ಪಾಡ್‌ನಲ್ಲಿ ಗರಿಷ್ಠ ತಾಪಮಾನ 46.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಖಾನಾಪುರ ಪಿ.ಎಸ್. ಖಮ್ಮಂ, ಮಹಬೂಬ್‌ನಗರದ ಬಯ್ಯಾರಂ ಮತ್ತು ಭದ್ರಾದ್ರಿ ಕೊತಗುಡೆಂನ ಗರಿಮೆಲ್ಲಪದವಿನಲ್ಲಿ 45.4 ಡಿಗ್ರಿ ಸೆಲ್ಸಿಯಸ್ ತಾಪಮಾನವನ್ನು ದಾಖಲಿಸಿದೆ. ಭೂಪಾಲಪಲ್ಲಿ ಮತ್ತು ಖಮ್ಮಂ ಜಿಲ್ಲೆಗಳ ಕೆಲವೆಡೆ 44 ಡಿಗ್ರಿ ಸೆಲ್ಸಿಯಸ್‌ಗಿಂತ ಅಧಿಕ ತಾಪಮಾನ ದಾಖಲಾಗಿದೆ. ತೆಲಂಗಾಣದಲ್ಲಿ ಮುಂದಿನ ಮೂರು ದಿನಗಳಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಲವು ಸ್ಥಳಗಳಲ್ಲಿ ಗರಿಷ್ಠ ತಾಪಮಾನ 40 ಡಿಗ್ರಿ ಮತ್ತು ಅದಕ್ಕಿಂತ ಹೆಚ್ಚಾಗಿರುತ್ತದೆ ಎಂದು ಹೈದರಾಬಾದ್‌ನ ಹವಾಮಾನ ಕೇಂದ್ರದ ಮುಖ್ಯಸ್ಥರಾದ ಡಾ.ಕೆ.ನಾಗ ರತ್ನ ತಿಳಿಸಿದ್ದಾರೆ.
ಉತ್ತರ ಮತ್ತು ಈಶಾನ್ಯ ತೆಲಂಗಾಣದಲ್ಲಿ ಗರಿಷ್ಠ ತಾಪಮಾನ 41 ಡಿಗ್ರಿಗಿಂತ ಹೆಚ್ಚಿರುತ್ತದೆ. ಹೈದರಾಬಾದ್ ಮತ್ತು ಅಕ್ಕಪಕ್ಕದ ಜಿಲ್ಲೆಗಳಲ್ಲಿ ಗರಿಷ್ಠ 38-40 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗುವ ಸಾಧ್ಯತೆ ಇದೆ. ಏತನ್ಮಧ್ಯೆ, ಶಾಖದ ಅಲೆಯ ಪರಿಸ್ಥಿತಿಯಿಂದಾಗಿ ರಾಜ್ಯದ ವಿವಿಧ ಭಾಗಗಳಲ್ಲಿ ಬಿಸಿಲಿನಿಂದಾಗಿ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಹೆಚ್ಚಾಗಿದೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ