ಸಕಲೇಶಪುರ : ಕೊಲ್ಲಹಳ್ಳಿಯ ಬಿಎಮ್ ರಸ್ತೆಯಲ್ಲಿ ಮುಂಜಾನೆ ಕಾಡಾನೆಯೊಂದು ರಾಜಾರೋಷವಾಗಿ ತಿರುಗಾಡುತ್ತಿರುವುದು ಕಂಡುಬಂತು. ಕಳೆದ ಎರಡು ದಿನಗಳ ಹಿಂದಷ್ಟೇ ಕಾಡಾನೆಗಳಿಗೆ ವಿಡಿಯೋ ಕಾಲರ್ ಅಳವಡಿಕೆ ಕಾರ್ಯಾಚರಣೆ ನಡೆಸಲಾಗಿತ್ತು. ರಾತ್ರಿ ಸಮಯದಲ್ಲಿ ಹೊರಗೆ ಬರಲು ಜನತೆ ಭಯ ಪಡುತ್ತಿದ್ದಾರೆ. ಕಳೆದ ವಾರವಷ್ಟೇ ಇದೇ ಪ್ರದೇಶದಲ್ಲಿ ಎರಡು ಜನರ ಮೇಲೆ ಕಾಡಾನೆ ದಾಳಿ ನಡೆಸಿದ ಘಟನೆ ನಡೆದಿದೆ. ಕಾಫಿ ತೋಟಗಳಿಗೆ ಕೆಲಸಕ್ಕೆ ಹೋಗಲು ಕೆಲಸಗಾರರು ಭಯ ಪಡುವಂತಾಗಿದೆ.