ತಾಜಾ ಸುದ್ದಿ

ಕಾಂಗ್ರೆಸ್ ಪಕ್ಷ ನೀಡಿದ ಐದು ಗ್ಯಾರಂಟಿ ಅನುಮೋದನೆ

Published

on

ಬೆಂಗಳೂರು, ಮೇ 20 : ರಾಜ್ಯದ ಜನತೆಗೆ ನನ್ನ ಕಡೆಯಿಂದ ಹಾಗೂ ಕಾಂಗ್ರೆಸ್ ಪಕ್ಷದಿಂದ ಧನ್ಯವಾದ. ಇನ್ನೇನು ಕೆಲ ಗಂಟೆಗಳಲ್ಲಿ ನೂತನ ಸರ್ಕಾರದ ಕ್ಯಾಬಿನೆಟ್ ಸಭೆ ನಡೆಯಲಿದ್ದು, ಕಾಂಗ್ರೆಸ್ ಪಕ್ಷ ನೀಡಿದ ಐದು ಗ್ಯಾರಂಟಿ ಅನುಮೋದನೆ ಆಗಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಶ್ವಾಸನೆ ನೀಡಿದ್ದಾರೆ.

  • ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಿ ಭಾಷಣ ಮಾಡಿದ ರಾಹುಲ್ ಗಾಂಧಿ, “ಭಾರತ್ ಜೋಡೋ ಯಾತ್ರೆಯಿಂದ ದ್ವೇಷ ಸೋತಿದೆ, ಪ್ರೀತಿ ಗೆದ್ದಿದೆ. ಕಾಂಗ್ರೆಸ್ ಪಕ್ಷ ಐದು ಗ್ಯಾರಂಟಿಗಳನ್ನು ನೀಡಿತ್ತು. ಗೃಹಲಕ್ಷ್ಮೀ, ಗೃಹಜ್ಯೋತಿ, ಅನ್ನಭಾಗ್ಯ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ಯುವನಿಧಿ ಗ್ಯಾರಂಟಿಗಳನ್ನು ನಾವು ನೀಡಿದ್ದೆವು, ಎಲ್ಲವನ್ನೂ ಈಡೇರಿಸುತ್ತೇವೆ” ಎಂದು ಹೇಳಿದ್ದಾರೆ”ಕೆಲವೇ ಹೊತ್ತಿನಲ್ಲಿ ನೂತನ ಸರ್ಕಾರ ಸಂಪುಟ ಸಭೆ ನಡೆಯಲಿದೆ. ಸಚಿವ ಸಂಪುಟ ಸಭೆಯಲ್ಲಿ ಎಲ್ಲ ಗ್ಯಾರಂಟಿಗಳು ಅನುಮೋದನೆ ಆಗಲಿದೆ. ಜನರು ಪ್ರೀತಿ, ಶಕ್ತಿ ಕಾಂಗ್ರೆಸ್​​ಗೆ ನೀಡಿದ್ದನ್ನು ಮರೆಯಲು ಸಾಧ್ಯವಿಲ್ಲ” ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

Trending

Exit mobile version