ತಾಜಾ ಸುದ್ದಿ

ಪುತ್ತೂರು: ಕಾರುಗಳು ಮುಖಾಮುಖಿ ಢಿಕ್ಕಿ- ಆರು ಮಂದಿಗೆ ಗಂಭೀರ ಗಾಯ

Published

on

ಪುತ್ತೂರು, ಮೇ 21 : ಕಾಣಿಯೂರು ಗ್ರಾಮದ ಪಿಲಿಗೂಡು ಎಂಬಲ್ಲಿ ಎರಡು ಕಾರುಗಳು ಮುಖಾಮುಖಿ ಢಿಕ್ಕಿಯಾಗಿ ಆರು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.

    • ಬೆಳ್ತಂಗಡಿಯಿಂದ ಪುತ್ತೂರಿಗೆ ತೆರಳುತ್ತಿದ್ದ ಸ್ವಿಫ್ಟ್ ಕಾರು ಎದುರುಗಡೆಯಿಂದ ಬರುತ್ತಿದ್ದ ಮಾರುತಿ 800 ವಾಹನಕ್ಕೆ ಡಿಕ್ಕಿ ಹೊಡೆದಿದೆ.ಇನ್ನು ಸ್ವಿಫ್ಟ್ ಕಾರಿನ ಚಾಲಕ ಮಹಾಬಲ ಶೆಟ್ಟಿ ಹಾಗೂ ಕಾರಿನಲ್ಲಿದ್ದ ಅನ್ವಿತಾ, ಮಾನ್ವಿತಾ, ಮಮತಾ, ಆಶಾ, ಮಾರುತಿ ಕಾರಿನಲ್ಲಿದ್ದ ಅಣ್ಣಿಗೌಡ ಎಂಬುವವರಿಗೆ ಗಾಯಗಳಾಗಿವೆ. ಇವರೆಲ್ಲರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಘಟನೆ ಸಂಬಂಧ ಪುತ್ತೂರು ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Leave a Reply

    Your email address will not be published. Required fields are marked *

    Trending

    Exit mobile version