ತಾಜಾ ಸುದ್ದಿ

ಬೆಳ್ತಂಗಡಿ: ಶಾಲಾ ವಾಹನ ಢಿಕ್ಕಿ ಪಾದಚಾರಿ ಸಾವು

Published

on

ಬೆಳ್ತಂಗಡಿ, ಮೇ 23 : ಶಾಲಾ ವಾಹನ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಸಾವನ್ನಪ್ಪಿರುವ ಘಟನೆ ಗುರುವಾಯನಕೆರೆ ಎಂಬಲ್ಲಿ ಸೋಮವಾರ ನಡೆದಿದೆ.

ಮೃತರನ್ನು ಕಸಬಾ ನೆಡಿಗುತ್ತು ನಿವಾಸಿ ಯೋಗೀಶ್ ಪೂಜಾರಿ (40) ಎಂದು ಗುರುತಿಸಲಾಗಿದೆ.

ಶಾಲಾ ಬಸ್ ಬೆಳ್ತಂಗಡಿಯಿಂದ ಮದಡ್ಕ ಕಡೆಗೆ ಹೋಗುತ್ತಿತ್ತು. ಈ ವೇಳೆ ಬಸ್ ಯೋಗೀಶ್ ಪೂಜಾರಿ ಅವರಿಗೆ ಡಿಕ್ಕಿ ಹೊಡೆದು ಅವರ ಕಾಲಿನ ಮೇಲೆ ಹರಿದಿದೆ. ಗಂಭೀರವಾಗಿ ಗಾಯಗೊಂಡ ಪೂಜಾರಿ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ.

ಇನ್ನು ನಿರ್ಲಕ್ಷ್ಯದ ಚಾಲನೆಗಾಗಿ ಚಾಲಕ ಶಶಿಧರ್ ವಿರುದ್ಧ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

Trending

Exit mobile version