ಉಡುಪಿ,ಮೇ23:ಮುಂಬೈಯಿಂದ ಮಗಳ ಮದುವೆ ಕಾರ್ಯಕ್ಕೆಂದು ಬಂದ ವ್ಯಕ್ತಿಯೊಬ್ಬರು ಹೊಟೇಲಿನಲ್ಲಿ ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ಉಡುಪಿಯಲ್ಲಿ ನಡೆದಿದೆ.
ಮೇ 21ರಂದು ರಾತ್ರಿ ವೇಳೆ ಈ ಘಟನೆ ನಡೆದಿದ್ದು ಮೃತ ವ್ಯಕ್ತಿಯನ್ನು ದೊಂಬಿವಿಲಿಯ ರಾಮಕೃಷ್ಣ ಮುದ್ದು ಶೆಟ್ಟಿ (68) ಎಂದು ಗುರುತಿಸಲಾಗಿದೆ.
ಮೇ22ಕ್ಕೆ ಇವರ ಎರಡನೇ ಮಗಳಿಗೆ ಉಡುಪಿ ಶ್ಯಾಮಿಲಿ ಸಭಾಭವನದಲ್ಲಿ ಮದುವೆ ನಿಶ್ಚಯವಾಗಿದ್ದು, ಈ ಸಂದರ್ಭದಲ್ಲಿ ಮೇ19ರಂದು ಇಡೀ ಕುಟುಂಬ ಸಮೇತರಾಗಿ ಬಂದು ಉಡುಪಿಯ ಹೊಟೋಲ್‌ನಲ್ಲಿ ಉಳಿದಿದ್ದರು, ಹೊಟೇಲ್ ರೂಮ್ ಒಳಗಡೆ ನಡೆಯುವಾಗ ಆಕಸ್ಮಿಕವಾಗಿ ತುಂಡಾದ ಕಾಲಿಗೆ ಅಳವಡಿಸಿದ ಬೆಲ್ಟ್ ಜಾರಿ ನೆಲಕ್ಕೆ ಬಿದ್ದಿದರಿಂದ ತಲೆಗೆ ತೀವ್ರವಾಗಿ ಗಾಯಗೊಂಡ ಇವರು ಜಿಲ್ಲಾಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು.