ತಾಜಾ ಸುದ್ದಿ

ಬೆಳ್ತಂಗಡಿ:ಸಿದ್ದರಾಮಯ್ಯರಿಂದ 24 ಹಿಂದೂ ಕಾರ್ಯಕರ್ತರ ಹತ್ಯೆ ಮಾಡಲಾಗಿದೆ-ಹರೀಶ್ ಪೂಂಜಾ

Published

on

ಬೆಳ್ತಂಗಡಿ, ಮೇ 24: ಸಿದ್ದರಾಮಯ್ಯ 24 ಹಿಂದೂ ಕಾರ್ಯಕರ್ತರ ಹತ್ಯೆ ಮಾಡಿದ್ದಾರೆ ಎಂದು ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಬೆಳ್ತಂಗಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಪೂಂಜಾ, ” ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಸತ್ಯಜಿತ್‌ ಸುರತ್ಕಲ್‌ ಕಾಂಗ್ರೆಸ್‌ ಅಭ್ಯರ್ಥಿ ಪರ ಬೆಳ್ತಂಗಡಿಯಲ್ಲಿ ಪ್ರಚಾರ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿ ಸಿದ್ದರಾಮಯ್ಯನವರ ಮೇಲೆ ಕೊಲೆ ಆರೋಪ ಹೊರಿಸಿ ನಾಲಿಗೆ ಹರಿಯಬಿಟ್ಟಿದ್ದಾರೆ.

ನಾನು ಹಿಂದುತ್ವಕ್ಕೆ ದ್ರೋಹ ಮಾಡಿದ್ದರೆ ಸತ್ಯಜಿತ್‌ ಸುರತ್ಕಲ್‌ ಬಂದು ಇಲ್ಲಿ ನನ್ನನ್ನು ಸೋಲಿಸಲು ಪ್ರಯತ್ನ ಮಾಡಿದ್ದರೆ ನಾನು ಒಪ್ಪಿಕೊಳ್ಳುತ್ತಿದ್ದೆ. ಆದರೆ ಸತ್ಯಣ್ಣ ನಿಮ್ಮ ಹತ್ತಿರ ಒಂದು ಮಾತು ಕೇಳುತ್ತೇನೆ. 24 ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಿದ ಸಿದ್ದರಾಮಯ್ಯ ಪರ ನೀವು ವೋಟ್‌ ಕೇಳಿದ್ದೀರಿ. ಬಜರಂಗದಳ ಬ್ಯಾನ್‌ ಮಾಡುತ್ತೇವೆ ಎಂದ ಕಾಂಗ್ರೆಸ್‌ ಪರ ನೀವು ಪ್ರಚಾರ ಮಾಡಿದ್ದೀರಾ ಎಂದು ಕಿಡಿಕಾರಿದ್ದರು.

ಈ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತರು ಗರಂ ಆಗಿದ್ದು, ಸ್ವಯಂಪ್ರೇರಿತ ದೂರು ದಾಖಲಿಸಲು ಮುಂದಾಗಿದ್ದಾರೆ. ಇನ್ನು ಸಿದ್ದರಾಮಯ್ಯ ವಿರುದ್ದ ಸುಳ್ಳು ಆರೋಪ ಮಾಡಿರುವ ಬಗ್ಗೆ ಪುತ್ತೂರಿನ ಠಾಣೆಗೆ ಈಗಾಗಲೇ ಹರೀಶ್ ಪೂಂಜಾ ವಿರುದ್ದ ದೂರು ನೀಡಲಾಗಿದೆ.

WhatsAppTelegramFacebookTwitterEmailMessageShare

Leave a Reply

Your email address will not be published. Required fields are marked *

Trending

Exit mobile version