ತಾಜಾ ಸುದ್ದಿ

ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ 81 ಕೈದಿಗಳನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ ಮಾಡಲಾಗಿದೆ

Published

on

ಆನೇಕಲ್, ಮೇ 24 : ರಾಜ್ಯ ಸರ್ಕಾರವೂ ಸನ್ನಡತೆಯ ಆಧಾರದ ಮೇಲೆ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ 81 ಕೈದಿಗಳನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ ಮಾಡಿದೆ.

214 ಕೈದಿಗಳ ಬಿಡುಗಡೆಗೆ ರಾಜ್ಯ ಸರ್ಕಾರ ಆದೇಶ ನೀಡಿತ್ತು. ಆದ್ರೆ ಮಂಗಳವಾರ(ಮೇ 23) ಇಬ್ಬರು ಮಹಿಳಾ ಕೈದಿಗಳು ಸೇರಿದಂತೆ 81 ಕೈದಿಗಳನ್ನು ಬಿಡುಗಡೆ ಮಾಡಲಾಗಿದೆ.

ಇನ್ನು ಜೈಲಿನ ಅಧಿಕಾರಿಗಳು ಬಿಡುಗಡೆ ಪ್ರಮಾಣ ಪತ್ರ ನೀಡಿ ಕಳುಹಿಸಿದ್ದಾರೆ. ಮತ್ತೆ ಅಪರಾಧ ಕೃತ್ಯದಲ್ಲಿ ಭಾಗಿಯಾಗಲ್ಲ ಎಂದು ಕೈದಿಗಳು ಬರೆದುಕೊಟ್ಟಿದ್ದಾರೆ.

ಬಿಜೆಪಿ ಸರ್ಕಾರ ಅಸ್ತಿತ್ವದಲ್ಲಿದ್ದಾಗ ತೆಗೆದುಕೊಳ್ಳಲಾಗಿದ್ದ ಬಿಡುಗಡೆ ನಿರ್ಣಯವನ್ನು ಸೋಮವಾರ ರಾಜ್ಯಪಾಲರ ಅಂಕಿತ ನಂತರ ಬಿಡುಗಡೆ ಭಾಗ್ಯ ಸಿಕ್ಕಿದೆ. ಇನ್ನು ಉತ್ತಮ ಸನ್ನಡತೆ ಇರುವ ಒಟ್ಟು 214 ಕೈದಿಗಳ ಬಿಡುಗಡೆಗೆ ಸ್ಥಾಯಿ ಸಮಿತಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.

Leave a Reply

Your email address will not be published. Required fields are marked *

Trending

Exit mobile version