ಬಿಹಾರ: ಶಾಲೆಯ ಪ್ರಾಂಶುಪಾಲರು ಮತ್ತು ಶಿಕ್ಷಕಿಯರು ನಡುವಿನ ತೀವ್ರ ವಾಗ್ವಾದವು ವಿಕೋಪಕ್ಕೆ ತಿರುಗಿ ಪರಸ್ಪರ ಚಪ್ಪಲಿಯಿಂದ ಹೊಡೆದಾಡಿಕೊಂಡ ಘಟನೆ ಬಿಹಾರದ ಪಾಟ್ನಾ ಜಿಲ್ಲೆಯ ಕೌರಿಯಾ ಪಂಚಾಯತ್‌ನಲ್ಲಿರುವ ಬಿಹ್ತಾ ಮಿಡ್ಲ್ ಸ್ಕೂಲ್‌ನಲ್ಲಿ ನಡೆದಿದೆ. ಘಟನೆಯ ಕುರಿತು ವಿಡಿಯೋ ವೈರಲ್ ಆಗುತ್ತಿದೆ.
ಶಾಲಾ ಮುಖ್ಯೋಪಾಧ್ಯಾಯಿನಿ ಕಾಂತಿ ಕುಮಾರಿ ಹಾಗೂ ಮತ್ತೋರ್ವ ಶಿಕ್ಷಕಿ ಅನಿತಾ ಕುಮಾರಿ ವಾಗ್ವಾದದಲ್ಲಿ ಭಾಗಿಯಾಗಿದ್ದರು ಎಂದು ವರದಿಯಾಗಿದೆ.ವಿಡಿಯೋದಲ್ಲಿ, ಮೊದಲು ಪ್ರಾಂಶುಪಾಲರು ಮತ್ತು ಶಿಕ್ಷಕಿಯರು ಕೊಠಡಿಯೊಳಗೆ ಜೋರಾಗಿ ಮಾತನಾಡುತ್ತಿರುವುದನ್ನು ನೋಡುತ್ತಿರುವುದನ್ನು ನೋಡಬಹುದು. ಏಕಾಏಕಿ ಹೊರಗೆ ಬಂದ ಅವರು ಕೈಯ್ಯಲ್ಲಿ ಚಪ್ಪಲಿ ಹಿಡಿದು ಹೊಡೆದಾಡಲು ಶುರು ಮಾಡುತ್ತಾರೆ.ಅಲ್ಲಿ ನೆರೆದಿದ್ದವರು ಹೊಡೆದಾಟವನ್ನು ರೆಕಾರ್ಡ್ ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಅಪ್ಲೋಡ್ ಮಾಡಿದ್ದಾರೆ. ವೈರಲ್ ವಿಡಿಯೋಗಳು ವೈಯಕ್ತಿಕ ವಿವಾದದ ಹಿನ್ನೆಲೆಯಲ್ಲಿ ಈ ಜಗಳ ಉಂಟಾಗಿದೆ ಎನ್ನಲಾಗಿದೆ.ಘಟನೆಯ ಬಗ್ಗೆ ಬ್ಲಾಕ್ ಶಿಕ್ಷಣ ಅಧಿಕಾರಿಯನ್ನು ಕೇಳಿದಾಗ, ಇದು ಬಿಹ್ತಾ ಮಧ್ಯಮ ಶಾಲೆಯಲ್ಲಿ ನಡೆದಿದೆ ಎಂದು ಅವರು ಖಚಿತಪಡಿಸಿದ್ದಾರೆ ಎಂದು ವರದಿಯಿಂದ ತಿಳಿದು ಬಂದಿದೆ.ಹಂಗಾಮಿ ಪ್ರಾಂಶುಪಾಲರು ಮತ್ತು ಸಹಾಯಕ ಶಿಕ್ಷಕರ ನಡುವಿನ ವೈಯಕ್ತಿಕ ವಿವಾದದಿಂದ ಈ ವಾಗ್ವಾದ ಉಂಟಾಗಿದ್ದು, ಇದು ಸರ್ಕಾರದ ನಿಯಮಾವಳಿಗಳ ಉಲ್ಲಂಘನೆಯಾಗಿದೆ ಎಂದು ಅವರು ಬಹಿರಂಗಪಡಿಸಿದ್ದಾರೆ ಎಂದು ವರದಿಯಾಗಿದೆ.