ಕ್ರೈಂ ನ್ಯೂಸ್

ಕುತ್ತಾರು: ಅಕ್ರಮವಾಗಿ ದನ-ಕರುಗಳ ಸಾಗಾಟ – ಬಜರಂಗದಳ ಕಾರ್ಯಕರ್ತರಿಂದ ರಕ್ಷಣೆ

Published

on

Zoom Karnataka : ಜೂ,07 – ಉಳ್ಳಾಲ: ಅಕ್ರಮವಾಗಿ ಜಾನುವಾರು ಸಾಗಾಟ ನಡೆಸುತ್ತಿದ್ದ ವಾಹನ ತಡೆದ ಬಜರಂಗದಳ ಕಾರ್ಯಕರ್ತರು, ಅಮಾನವೀಯವಾಗಿ ಸಾಗಾಟ ನಡೆಸುತ್ತಿದ್ದ ಐದು ಜಾನುವಾರುಗಳನ್ನು ರಕ್ಷಿಸಿ ಪೊಲೀಸರ ವಶಕ್ಕೆ ಒಪ್ಪಿಸಿರುವ ಘಟನೆ ಕುತ್ತಾರು ಸಮೀಪದ ಭಂಡಾರಬೈಲು ಎಂಬಲ್ಲಿ ಸಂಭವಿಸಿದೆ.

ಕೇರಳ ನೋಂದಣಿಯ ಏಸ್ ವಾಹನವು ಮುಡಿಪು, ಕೊಣಾಜೆ, ಮದಕ ಮಾರ್ಗವಾಗಿ 5 ಜಾನುವಾರುಗಳನ್ನ ಅಕ್ರಮವಾಗಿ ತುಂಬಿಸಿ ಸಾಗುತ್ತಿದ್ದ ವೇಳೆ ಭಂಡಾರ ಬೈಲು ರಸ್ತೆಯ ಕಡಿದಾದ ಎತ್ತರದ ತಿರುವು ಏರಲಾರದೆ ನಿಂತು ಬಿಟ್ಟಿತ್ತು.ಈ ವೇಳೆ ಸ್ಥಳದಲ್ಲಿದ್ದ ಬಜರಂಗದಳದ ಕಾರ್ಯಕರ್ತರು ವಾಹನವನ್ನು ತಳ್ಳಿ ಚಾಲಕನಿಗೆ ಸಹಾಯ ಮಾಡಲು ಮುಂದಾಗಿದ್ದಾರೆ.

ವಾಹನದ ಹಿಂದುಗಡೆ ಮೀನಿನ ಪ್ಲಾಸ್ಟಿಕ್ ಟ್ರೇಗಳನ್ನ ರಾಶಿ ಹಾಕಲಾಗಿದ್ದು ಅದರೊಳಗಡೆ ಸದ್ದು ಕೇಳಿಸಿದಾಗ ಒಳಗಡೆ 5 ಜಾನುವಾರುಗಳನ್ನು ಉಸಿರುಗಟ್ಟಿಸಿ ಕಟ್ಟಿ ಹಾಕಿರುವುದನ್ನು ಸಹಾಯಕ್ಕೆ ಬಂದವರು ಕಂಡಿದ್ದಾರೆ. ತಕ್ಷಣ ವಾಹನದಲ್ಲಿದ್ದ ಚಾಲಕ ಸೇರಿ ಇಬ್ಬರು ಪರಾರಿಯಾಗಿದ್ದು, ಎಸ್ಕಾರ್ಟ್ ನೀಡುತ್ತಿದ್ದ ಇಬ್ಬರು ಬೈಕುಗಳನ್ನು ಬಿಟ್ಟು ಪರಾರಿಯಾಗಿದ್ದಾರೆ.
ವಾಹನದಲ್ಲಿದ್ದ ದನ ಕರುಗಳನ್ನು ಬಜರಂಗದಳ ಕಾರ್ಯಕರ್ತರು ರಕ್ಷಿಸಿ ಉಳ್ಳಾಲ ಠಾಣೆಗೆ ಒಪ್ಪಿಸಿದ್ದಾರೆ

Leave a Reply

Your email address will not be published. Required fields are marked *

Trending

Exit mobile version