ರಾಷ್ಟ್ರ ಸುದ್ದಿ

ಖಲಿಸ್ತಾನಿ ಬೆಂಬಲಿಗರಿಂದ ಇಂದಿರಾ ಗಾಂಧಿ ಹತ್ಯೆಯ ಸ್ತಬ್ಧಚಿತ್ರ ಮೆರವಣಿಗೆ – ಪೋಟೊ ವೈರಲ್

Published

on

ಒಟ್ಟೋವಾ, ಜೂ 09(Zoom Karnataka): ಇಂದಿರಾ ಗಾಂಧಿ ಅವರ ಹತ್ಯೆಗೆ ಸಂಬಂಧಿಸಿದ ಸ್ತಬ್ಧಚಿತ್ರವನ್ನು ಖಲಿಸ್ತಾನಿ ಬೆಂಬಲಿಗರು ಮೆರವಣಿಗೆ ಮಾಡಿರುವ ಘಟನೆ ಕೆನಡಾದಲ್ಲಿ ನಡೆದಿದೆ.
1984 ಅಕ್ಟೋಬರ್‌ 31 ರಂದು ಇಂದಿರಾ ಗಾಂಧಿ ಅವರನ್ನು ಹತ್ಯೆ ಮಾಡಲಾಗಿದ್ದು, ಪ್ರಧಾನಿಯ ಭದ್ರತಾ ಸಿಬ್ಬಂದಿಗಳೇ ಹತ್ಯೆ ಮಾಡಿದ್ದರು. ಆ ಸಂದರ್ಭವನ್ನು ಸ್ತಬ್ಧಚಿತ್ರದಲ್ಲಿ ಬಿಂಬಿಸಲಾಗಿತ್ತು.

ಇನ್ನು ಜೂ. 6 ರಂದು ‘ಆಪರೇಷನ್‌ ಬ್ಲೂ ಸ್ಟಾರ್‌’ ಆಚರಣೆಗೂ ಮೊದಲು ಜೂ.4 ರಂದು ಖಲಿಸ್ತಾನಿ ಬೆಂಬಲಿಗರು ಪರೇಡ್‌ ಆಯೋಜಿಸಿದ್ದು, ಪ್ರಧಾನಿ ಇಂದಿರಾ ಗಾಂಧಿ ಅವರನ್ನು ಕೊಲೆಗಾರರು ಹತ್ಯೆ ಮಾಡುತ್ತಿರುವ ಸಂದರ್ಭದ ಸ್ತಬ್ಧಚಿತ್ರ ನಿರ್ಮಿಸಲಾಗಿದೆ.

ಕೊಲೆ ಮಾಡಿದವರು ಪ್ರಧಾನಿ ಭದ್ರತಾ ಸಿಬ್ಬಂದಿಯೇ ಆಗಿದ್ದರು. ಆ ಸ್ತಬ್ಧಚಿತ್ರದಲ್ಲಿ ‘ಶ್ರೀ ದರ್ಬಾರ್ ಸಾಹಿಬ್ ಮೇಲಿನ ದಾಳಿಗೆ ಪ್ರತೀಕಾರ’ ಎಂದು ಹೇಳುವ ಫಲಕ ಅಳವಡಿಸಲಾಗಿದೆ.

Leave a Reply

Your email address will not be published. Required fields are marked *

Trending

Exit mobile version