ಶಕ್ತಿ ಯೋಜನೆಗೆ ಚಾಲನೆ: ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ
Zoomkarnataka, ಬಂಟ್ವಾಳ: ಕೆಎಸ್ಆರ್ಟಿಸಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆಯನ್ನು ರಾಜ್ಯ ಸರಕಾರ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಬಂಟ್ವಾಳ ವಿಧಾನ ಸಭಾ ಕ್ಷೇತ್ರ ಕಾಂಗ್ರೆಸ್ ವತಿಯಿಂದ ರವಿವಾರ ಬಿ.ಸಿ.ರೋಡ್ನಲ್ಲಿ ಸಂಭ್ರಮಾರಣೆ ನಡೆಯಿತು.
ಈ ವೇಳೆ ಮಾತನಾಡಿದ ಮಾಜಿ ಸಚಿವ ಬಿ.ರಮಾನಾಥ ರೈ ಅವರು, ಕಾಂಗ್ರೆಸ್ ಚುನಾವಣಾ ಪೂರ್ವದಲ್ಲಿ ಘೊಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಒಂದನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವ ಮೂಲಕ ನುಡಿದಂತೆ ನಡೆಯಲಾಗಿದೆ. ಇನ್ನು ನಾಲ್ಕು ಗ್ಯಾರಂಟಿಗಳು ಶೀಘ್ರವೇ ಜಾರಿಯಾಗಲಿದೆ. ಆ ಮೂಲಕ ದೇಶದಲ್ಲಿ ಕರ್ನಾಟಕ ಇಂದು ಮಾದರಿ ರಾಜ್ಯವಾಗಿದೆ ಎಂದರು.