ರಾಜಕೀಯ

ಜೂ.21ಕ್ಕೆ ಮೋದಿಯವರನ್ನು ಸಿಎಂ ಸಿದ್ದರಾಮಯ್ಯ ಭೇಟಿ ಸಾಧ್ಯತೆ

Published

on

ಬೆಂಗಳೂರು, ಜೂ 16 (Zoom Karnataka): ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಲು ಸಮಯಾವಕಾಶ ಕೋರಿದ್ದಾರೆ.

ಹೈಕಮಾಂಡ್‌ ಭೇಟಿಗಾಗಿ ಜೂ.೨೧ರಂದು ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದಾರೆ. ಈ ವೇಳೆ ಅವಕಾಶ ಸಿಕ್ಕಿದರೆ ಪ್ರಧಾನಿ ಹಾಗೂ ರಾಷ್ಟ್ರಪತಿ ಅವರನ್ನು ಸೌಜನ್ಯದ ಭೇಟಿ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಇನ್ನು ಈವರೆಗೂ ಪ್ರಧಾನಮಂತ್ರಿ ಹಾಗೂ ರಾಷ್ಟ್ರಪತಿಗಳ ಕಚೇರಿಯಿಂದ ಅಧಿಕೃತ ಭೇಟಿ ಬಗ್ಗೆ ಸಮಯವಕಾಶದ ಬಗ್ಗೆ ಮಾಹಿತಿ ಬಂದಿಲ್ಲ. ಒಂದು ವೇಳೆ ಭೇಟಿಗೆ ಅವಕಾಶ ಸಿಕಕರೆ ರಾಜ್ಯದ ವಿಚಾರಗಳ ಬಗ್ಗೆಯೂ ಪ್ರಸ್ತಾಪಿಸುವ ಸಾಧ್ಯತೆಯಿದೆ.

WhatsAppTelegramFacebookTwitterEmailMessageShare

Leave a Reply

Your email address will not be published. Required fields are marked *

Trending

Exit mobile version