ತಾಜಾ ಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾರ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸಿ.ಬಿ ರಿಷ್ಯಂತ್ ನೇಮಕ

Published

on

ಬೆಂಗಳೂರು ಜೂ 20 (Zoom Karnataka): ಜಿಲ್ಲಾಧಿಕಾರಿಗಳ ವರ್ಗಾವಣೆ ಬೆನ್ನಲ್ಲೇ ಪೊಲೀಸ್ ಇಲಾಖೆಗೆ ಭರ್ಜರಿ ಸರ್ಜರಿ ಮಾಡಲಾಗಿದ್ದು, 15 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾರ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಸಿ.ಬಿ ರಿಷ್ಯಂತ್ ಅವರನ್ನು ದಕ್ಷಿಣ ಕನ್ನಡದ ಎಸ್‌ಪಿಯಾಗಿ ನೇಮಕಗೊಳಿಸಲಾಗಿದೆ.

ಈ ಹಿಂದೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ವಿಕ್ರಮ್ ಅಮತೆ ಅವರು ವೈದ್ಯಕೀಯ ರಜೆಯಲ್ಲಿ ತೆರಳಿದ ಹಿನ್ನಲೆಯಲ್ಲಿ ಸಿ ಬಿ ರಿಷ್ಯಂತ್ ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾರ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕಗೊಂಡಿದ್ದರು.

2013ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದ ರಿಷ್ಯಂತ್ ಅವರು ಈ ಹಿಂದೆ ದಾವಣಗೆರೆಯ ಎಸ್‌ಪಿಯಾಗಿ ಸೇವೆ ಸಲ್ಲಿಸುತ್ತಿದ್ದರು. ವಿಧಾನಸಭೆ ಚುನಾವಣೆಗೆ ಮುನ್ನ ಬೆಂಗಳೂರಿನಲ್ಲಿ ನಿಯೋಜನೆಗೊಂಡಿದ್ದರು.

ಬೆಂಗಳೂರಿನವರಾದ ರಿಷ್ಯಂತ್ ಅವರು ಈ ಹಿಂದೆ ದಕ್ಷಿಣ ಕನ್ನಡ, ಮೈಸೂರು, ಬಾಗಲಕೋಟೆ ಮತ್ತು ದಾವಣಗೆರೆಯ ಎಎಸ್‌ಪಿಯಾಗಿ ಸೇವೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *

Trending

Exit mobile version