ಮಂಗಳೂರು ಜೂ 20 (Zoom Karnataka): ಕೇಂದ್ರದಿಂದ ರಾಜ್ಯಕ್ಕೆ ಅಕ್ಕಿ ನಿರಾಕರಣೆ ಆರೋಪದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಬಟ್ಟಲು ತಟ್ಟಿ ವಿಭಿನ್ನವಾಗಿ ಪ್ರತಿಭಟನೆ ನಡೆಯಿತು.
ನಗರದ ಕ್ಲಾಕ್ ಟವರ್ ಮುಂಭಾಗದಲ್ಲಿ ನೂರಾರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಜಿಲ್ಲಾ ಮುಖಂಡರು ಬಟ್ಟಲು ತಟ್ಟಿ, ಜೋಳಿಗೆ ಹಾಕಿಕೊಂಡು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ವಿರುದ್ಧ ಘೋಷಣೆ ಕೂಗಿದ್ರು.
ರಾಜ್ಯದ ಬಡವರಿಗೆ ಕೇಂದ್ರದಿಂದ ಅನ್ಯಾಯ ಆಗ್ತಿದೆ ಎಂದು ಮಾಜಿ ಸಚಿವ ರಮಾನಾಥ ರೈ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಈ ಹಿಂದೆ ಕಾಂಗ್ರೆಸ್ ರಾಜ್ಯ ಸರಕಾರವಿದ್ದ ಸಂದರ್ಭದಲ್ಲಿ ಅಕ್ಕಿ ನಿಲ್ಲಿಸಿದ ವಿಚಾರದಲ್ಲಿ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರು ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರದ ಮಕ್ಕಳನ್ನು ಸೇರಿಸಿಕೊಂಡು ತಟ್ಟೆ ಬಡಿದು ಪ್ರತಿಭಟನೆ ನಡೆಸಿದ್ರು. ಇದೀಗ ರಮಾನಾಥ ರೈ ಅವರೇ ಕೇಂದ್ರ ಸರ್ಕಾರದ ವಿರುದ್ಧ ಬಟ್ಟಲು ತಟ್ಟಿ ಅಕ್ಕಿಗಾಗಿ ಪ್ರತಿಭಟನೆ ನಡೆಸಿದ್ದಾರೆ