ರಾಜ್ಯ ಸುದ್ದಿ

ಮೀನುಗಾರಿಕಾ ಅಭಿವೃದ್ದಿ ನಿಗಮದ ನಿರ್ದೇಶಕ ಹಾಗೂ ಅಧ್ಯಕ್ಷರಾಗಿ ಮಂಕಾಳ ಎಸ್. ವೈದ್ಯ ನೇಮಕ

Published

on

ಮಂಗಳೂರು, ಜೂ 21 (Zoom Karnataka): ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಮಂಕಾಳ ಎಸ್. ವೈದ್ಯ ಅವರನ್ನು ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಆಡಳಿತ ಮಂಡಳಿಯ ನಿರ್ದೇಶಕ ಹಾಗೂ ನಿಗಮದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಇತ್ತೀಚೆಗೆ ಸಚಿವರು ನಗರದ ಹೊಯ್ಗೆ ಬಜಾರ್‍ಗೆ ಭೇಟಿ ನೀಡಿ ನಿಗಮದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಕೇಂದ್ರ ಕಚೇರಿಯಲ್ಲಿ ನಿಗಮದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ನಿಗಮದ ಕಾರ್ಯ ಚಟುವಟಿಕೆಗಳ ಮಾಹಿತಿ ಪಡೆದು ಅಭಿವೃದ್ಧಿ ಬಗ್ಗೆ ಮಾರ್ಗದರ್ಶನ ನೀಡಿದರು. ನಿಗಮದ ಅಧಿಕಾರಿ, ಸಿಬ್ಬಂದಿಗಳಿಗೆ ತಮ್ಮ ಅಧಿಕಾರದ ಅವಧಿಯಲ್ಲಿ ನಿಗಮವನ್ನು ಲಾಭಾಂಶದತ್ತ ಕೊಂಡೊಯ್ಯುವ ಬಗ್ಗೆ ಸೂಕ್ತ ಸಲಹೆ ಸೂಚನೆ ನೀಡಿದರು.

ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್, ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಕೆ. ಗಣೇಶ್, ಪ್ರಧಾನ ವ್ಯವಸ್ಥಾಪಕ ಮಹೇಶ್‍ ಕುಮಾರ್ ಯು ಮತ್ತು ಮೀನುಗಾರಿಕೆ ಜಂಟಿ ನಿರ್ದೇಶಕ ಹರೀಶ್‍ಕುಮಾರ್, ಮುಖಂಡರಾದ ಮಿಥುನ್ ರೈ, ಮೀನುಗಾರ ಮುಖಂಡರಾದ ಚೇತನ್ ಬೆಂಗ್ರೆ ಹಾಗೂ ನಿಗಮದ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Trending

Exit mobile version