ಕರಾವಳಿ

ಸಜೀಪಮೂಡ: ಕಾಂಗ್ರೆಸ್ ವತಿಯಿಂದ ಇಂದಿರಾ ಸೇವಾ ಕೇಂದ್ರ ಉದ್ಘಾಟನೆ

Published

on

ಸಜೀಪಮೂಡ,ಜೂ 27 (Zoom Karnataka) ಬೊಳ್ಳಾಯಿ ಜಂಕ್ಷನ್ ಹಾಗೂ ಸುಭಾಶ್‍ನಗರದ ಬ್ರಹ್ಮಶ್ರೀ ನಾರಾಯಣ ಗುರು ಸಭಾಂಗಣದ ಆವರಣದಲ್ಲಿ ಸಜೀಪಮೂಡ ವಲಯ ಕಾಂಗ್ರೆಸ್ ವತಿಯಿಂದ ನಿರ್ವಹಿಸಲ್ಪಡುವ ಇಂದಿರಾ ಸೇವಾ ಕೇಂದ್ರವನ್ನು ಮಾಜಿ ಸಚಿವ ಬಿ. ರಮಾನಾಥ ರೈ ಉದ್ಘಾಟಿಸಿದರು.

ಈ ಸಂದರ್ಭ ಮಾತನಾಡಿದ ಅವರು ಸರ್ಕಾರದ ಎಲ್ಲಾ ಸೌಲಭ್ಯಗಳು ಜನರಿಗೆ ಸುಲಭವಾಗಿ ದೊರಕುವಂತಾಗಲೂ ಪಕ್ಷದ ವತಿಯಿಂದ ಇಂದಿರಾ ಸೇವಾ ಕೇಂದ್ರಗಳನ್ನು ಆರಂಭಿಸಲಾಗಿದ್ದು ಎಲ್ಲರೂ ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.

ಹೊಸ ಸರ್ಕಾರ ಘೋಷಣೆ ಮಾಡಿದ ಗ್ಯಾರಂಟಿಗಳನ್ನು ಅನುಷ್ಠಾನ ಮಾಡವ ಪ್ರಯತ್ನದಲ್ಲಿದೆ. ಈ ಯೋಜನೆಗಳು ಅನುಷ್ಠಾನವಾಗದಂತೆ ತಡೆಯುವ ಪ್ರಯತ್ನವನ್ನು ಬಿಜೆಪಿ ಮಾಡುತ್ತಿದೆ ಎಂದು ಆರೋಪಿಸಿದರು. ಮಹಿಳೆಯರು ಸರ್ಕಾರಿ ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣಿಸಿ ಸಂತೋಷ ಪಡುತ್ತಿದ್ದಾರೆ. ಉಳಿದ ಎಲ್ಲಾ ಗ್ಯಾರಂಟಿಗಳನ್ನು ಸರಕಾರ ಖಂಡಿತವಾಗಿಯೂ ಅನುಷ್ಠಾನ ಮಾಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಸಂದರ್ಭ ಜಿ.ಪಂ. ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ತಾ.ಪಂ. ಮಾಜಿ ಸದಸ್ಯ ಕೆ. ಸಂಜೀವ ಪೂಜಾರಿ, ಮಾಜಿ ಉಪಾಧ್ಯಕ್ಷ ಅಬ್ಬಾಸ್ ಅಲಿ, ಪಾಣೆಮಂಗಳೂರು ಬ್ಲಾಖ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಸಜೀಪ ಮೂಡ ಗ್ರಾಮ ಪಂಚಾಯತಿ ಅಧ್ಯಕ್ಷೆ ಹರಿಣಾಕ್ಷಿ, ಮಾಜಿ ಅಧ್ಯಕ್ಷ ದೇವಿಪ್ರಸಾದ್ ಪೂಂಜ, ಸದಸ್ಯರಾದ ವಿಶ್ವನಾಥ ಬೆಳ್ಚಾಡ, ಯೋಗೀಶ್ ಬೆಳ್ಚಾಡ, ಫೌಝೀಯಾ, ಶೋಭಾ ಶೆಟ್ಟಿ, ಯಮುನಾ, ಪ್ರಮಿಳಾ, ಅಝೀಝ್ ಬೊಳ್ಳಾಯಿ, ಅಶೋಕ್ ಪೂಜಾರಿ ಕೋಮಾಲಿ, ವಲಯ ಕಾಂಗ್ರೆಸ್ ಅಧ್ಯಕ್ಷ ಕರೀಂ ಬೊಳ್ಳಾಯಿ, ಕಾರ್ಯದರ್ಶಿ ಮಲಿಕ್ ಕೊಳಕೆ ಪ್ರಮುಖರಾದ ಪ್ರಭಾಕರ ಶೆಟ್ಟಿ, ಜಯಶಂಕರ್ ಕಾನ್ಸಲೆ, ಶೈಲೇಶ್ ಪೂಜಾರಿ, ಅಶ್ವಿನ್ ಪೂಜಾರಿ ಕಾರಾಜೆ, ಸೀತಾರಾಮ ಶೆಟ್ಟಿ, ಇಬ್ರಾಹಿಂ ಮೊದಲಾದವರು ಉಪಸ್ಥಿತರಿದ್ದರು. ಗಿರೀಶ್ ಕುಮಾರ್ ಪೆರ್ವ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

Trending

Exit mobile version