ಬಕ್ರೀದ್ ದಿನವೇ ರಾಜ್ ಬಿ.ಶೆಟ್ಟಿ ಬಹುನಿರೀಕ್ಷಿತ ಟೋಬಿ ಚಿತ್ರದ ಫಸ್ಟ್ ಲುಕ್ ಟೀಸರ್ ನಿನ್ನೆ ಅನಾವರಣಗೊಂಡಿದೆ. ಬೆಂಗಳೂರಿನ ಖಾಸಗಿ ಮಾಲ್ನಲ್ಲಿ ಟೋಬಿ ಚಿತ್ರದ ಫಸ್ಟ್ ಲುಕ್ ಅನ್ನು ನಟ ರಾಜ್ ಬಿ.ಶೆಟ್ಟಿ ಮತ್ತು ಚಿತ್ರತಂಡ ಬಿಡುಗಡೆಗೊಳಿಸಿದೆ.
ಕನ್ನಡ ಚಿತ್ರರಂಗದಲ್ಲಿ ಬಿಡುಗಡೆಗೂ ಮುನ್ನವೇ ಭಾರಿ ಸದ್ದು ಮಾಡುತ್ತಿರುವ ರಾಜ್ ಬಿ.ಶೆಟ್ಟಿ ಅಭಿನಯದ ಟೋಬಿ, ಸಿನಿಪ್ರೇಕ್ಷಕರಲ್ಲಿ ಮತ್ತು ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲವನ್ನು ಕೆರಳಿಸಿದೆ. ಚಿತ್ರದ ಫಸ್ಟ್ ಲುಕ್ ಟೀಸರ್ನಲ್ಲಿ ಟಗರು ಮತ್ತು ರಾಜ್ ಮುಖವನ್ನು ವಿಭಿನ್ನವಾಗಿ ತೋರಿಸಲಾಗಿದೆ.
ಟೋಬಿ ಸಿನಿಮಾ ನೈಜ ಕಥೆಯಾಗಿದೆ. ಕಾರವಾರದ ಮೂಲದ ಕಥೆಯನ್ನು ಇಟ್ಟುಕೊಂಡು ಚಿತ್ರಕಥೆ ಹೆಣೆಯಲಾಗಿದೆ. ಅಂದಹಾಗೆಯೇ ಈ ಸಿನಿಮಾದಲ್ಲಿ 2 ನಟಿಯರ ಜೊತೆಗೆ ರಾಜ್ ಬಿ ಶೆಟ್ಟಿ ನಟಿಸಿದ್ದಾರೆ. ಆಗಸ್ಟ್ 25ಕ್ಕೆ ಈ ಸಿನಿಮಾ ತೆರೆ ಮೇಲೆ ಬರಲು ರೆಡಿಯಾಗಿದೆ.