ರಾಷ್ಟ್ರ ಸುದ್ದಿ

ಭೀಕರ ಬಸ್ ದುರಂತ 25 ಪ್ರಯಾಣಿಕರು ಸ್ಥಳದಲ್ಲೇ ಸಾವು

Published

on

ಮಹಾರಾಷ್ಟ್ರ,ಜು 01(Zoom Karnataka):ಮಹಾರಾಷ್ಟ್ರದ ಬುಲ್ಧಾನ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 25 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಬಸ್ಸಿನಲ್ಲಿ ಒಟ್ಟು 33 ಮಂದಿ ಪ್ರಯಾಣ ಮಾಡುತ್ತಿದ್ದರು, ಇವರಲ್ಲಿ 8 ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬುಲ್ಧಾನ ಜಿಲ್ಲೆಯ ಸಿಂಧಖೇದರಾಜ ಸಮೀಪದ ಪಿಂಪಲಖುಟಾ ಗ್ರಾಮದ ಬಳಿಯಲ್ಲಿರುವ ಸಮೃದ್ಧಿ ಹೆದ್ದಾರಿಯಲ್ಲಿ ದುರಂತ ಸಂಭವಿಸಿದೆ.
ನಿಯಂತ್ರಣ ಕಳೆದುಕೊಂಡ ಬಸ್​, ರಸ್ತೆಯ ಡಿವೈಡರ್​ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿದೆ. ಆ ಬೆಂಕಿಯು ಡೀಸೆಲ್ ಟ್ಯಾಂಕ್​ಗೆ ತಗುಲಿ ದೊಡ್ಡ ಅನಾಹುತ ಸಂಭವಿಸಿದೆ ಎಂದು ವರದಿಯಾಗಿದೆ.

ಈ ಬಸ್ ನಾಗ್ಪುರದಿಂದ ಪುಣೆಗೆ ಹೋಗುತ್ತಿತ್ತು. ಬಸ್‌ನಲ್ಲಿ ನಾಗ್ಪುರ, ವಾರ್ಧಾ ಮತ್ತು ಯವತ್ಮಾಲ್‌ನಿಂದ ಪ್ರಯಾಣಿಕರು ತೆರಳುತ್ತಿದ್ದರು. ಈ ಬಸ್ ವಿದರ್ಭ ಟ್ರಾವೆಲ್ಸ್​ಗೆ ಸೇರಿದೆ. ಜೀವ ರಕ್ಷಿಸಿಕೊಂಡವರಲ್ಲಿ ಡ್ರೈವರ್ ಹಾಗೂ ಕ್ಲೀನರ್ ಕೂಡ ಸೇರಿದ್ದಾನೆ. ಸದ್ಯ ಗಾಯಾಳುಗಳನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

Trending

Exit mobile version