ಸ್ಯಾಂಡಲ್ವುಡ್ನಲ್ಲಿ ಮತ್ತೊಂದು ಜೋಡಿ ಹಸೆಮಣೆ ಏರಲು ಸಜ್ಜಾಗಿದೆ. ಸ್ಯಾಂಡಲ್‌ವುಡ್ ಖ್ಯಾತ ನಟಿ ಹರ್ಷಿಕಾ ಪೂಣಚ್ಚ ಮತ್ತು ನಟ ಭುವನ್ ಪೊನ್ನಣ್ಣ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಹಲವು ವರ್ಷಗಳಿಂದ ಈ ಇಬ್ಬರು ಸ್ನೇಹಿತರಾಗಿದ್ದರು. ಇದೀಗ ಈ ಜೋಡಿ ಗುರು ಹಿರಿಯರ ಸಮ್ಮುಖದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದೆ. ಕೊಡವ ಸಂಪ್ರದಾಯದಂತೆ ಈ ಮದುವೆ ನಡೆಯಲಿದೆ.
ನಟಿ ಹರ್ಷಿಕಾ ಪೂಣಚ್ಚ ಮತ್ತು ಭುವನ್ ಪೊನ್ನಣ್ಣ ಮದುವೆ ಯಾವಾಗ ?
ಸ್ಯಾಂಡಲ್‌ವುಡ್ ನಟಿ ಹರ್ಷಿಕಾ ಪೂಣಚ್ಚ ಮತ್ತು ಭುವನ್ ಪೊನ್ನಣ್ಣ ಅವರು ಆಗಸ್ಟ್ 24ರಂದು ವಿರಾಜಪೇಟೆಯ ಅಮ್ಮತ್ತಿಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿರಿಸಲಿದ್ದಾರೆ. ಈ ಇಬ್ಬರ ವಿವಾಹದ ಆಮಂತ್ರಣ ಪತ್ರಿಕೆಯನ್ನು ಕೊಡವ ಭಾಷೆಯಲ್ಲಿ ಮುದ್ರಿಸಲಾಗಿದೆ. ಸದ್ಯ ಲಗ್ನಪತ್ರಿಕೆಯ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.