ನವದೆಹಲಿ, ಆ 15 (Zoom Karnataka): ಇಂದು ದೇಶದೆಲ್ಲೆಡೆ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಕೆಂಪು ಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಧ್ವಜಾರೋಹಣ ನೆರವೇರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು 77ನೇ ಸ್ವಾತಂತ್ರ್ಯ ದಿನದಂದು ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಿ ಬಳಿಕ ಕೆಂಪು ಕೋಟೆ ಕಡೆ ಆಗಮಿಸಿ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ.
ಇನ್ನು 10 ನೇ ಬಾರಿ ದೆಹಲಿಯ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಧ್ವಜಾರೋಹಣ ಮಾಡಿದ್ದು, ಕೆಂಪುಕೋಟೆ ತಲುಪಿದ ಪ್ರಧಾನಿ ಮೋದಿ ಅವರನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಖಾತೆ ರಾಜ್ಯ ಸಚಿವ ಅಜಯ್ ಭಟ್ ಮತ್ತು ರಕ್ಷಣಾ ಕಾರ್ಯದರ್ಶಿ ಗಿರಿಧರ್ ಆರಾಮ್ನೆ ಸ್ವಾಗತಿಸಿದರು.