ರಾಜ್ಯ ಸುದ್ದಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನ ಮಾಣಿಕ್ ಶಾ ಮೈದಾನದಲ್ಲಿ ಧ್ವಜಾರೋಹಣ

Published

on

ಬೆಂಗಳೂರು, ಆ 15 (Zoom Karnataka): ಇಂದು ದೇಶದೆಲ್ಲೆಡೆ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಮಾಣಿಕ್ ಶಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ.
ಈ ವೇಳೆ ಮಾತನಾಡಿದ ಅವರು, ನಾಡಿನ ಪ್ರತಿಯೊಬ್ಬ ಪ್ರಜೆಗೂ ಘನತೆಯ ಬದುಕಿನ ಸ್ವಾತಂತ್ರ್ಯವನ್ನು ಸಾಕಾರಗೊಳಿಸಲು ನಮ್ಮ ಸರ್ಕಾರವು ಗ್ಯಾರೆಂಟಿ ಯೋಜನೆಗಳನ್ನು ರೂಪಿಸಿದೆ. ಸ್ವಾತಂತ್ರ್ಯವೆಂದರೆ ಘನತೆಯ ಬದುಕಿನ ಗ್ಯಾರೆಂಟಿ. ನಾಡಿನ ಜನತೆಗೆ ಮತ್ತೊಮ್ಮೆ 77ನೇ ಸ್ವಾತಂತ್ರ್ಯೋತ್ಸವದ ಶುಭಾಶಯಗಳು ಎಂದರು.

ಇನ್ನು ಸಾವಿರಾರು ಜನರ ತ್ಯಾಗ, ಬಲಿದಾನಗಳ ಫಲವಾಗಿ ಇಂದು ನಾವು ಸ್ವಾತಂತ್ರ್ಯದ ಸವಿಯುಣ್ಣುತ್ತಿದ್ದೇವೆ. ಪ್ರಾಣದ ಹಂಗು ತೊರೆದು ದಾಸ್ಯದ ಸಂಕೋಲೆಯಿಂದ ದೇಶವನ್ನು ಬಿಡುಗಡೆಗೊಳಿಸಲು ಹೋರಾಡಿದ ಎಲ್ಲ ಮಹಾನ್ ಚೇತನಗಳಿಗೂ ಗೌರವ ಪೂರ್ವಕ ನಮನ ಸಲ್ಲಿಸುತ್ತೇನೆ ಎಂದಿದ್ದಾರೆ.

ಸ್ವತಂತ್ರ ಭಾರತದಲ್ಲಿ ಜೀವಿಸುತ್ತಿರುವ ನಮಗೆ ಸ್ವಾತಂತ್ರ್ಯ ಎಂಬುದು ಎಷ್ಟು ದುಬಾರಿಯಾದ ಸಂಗತಿ ಎಂಬುದು ಅರಿವಿಗೆ ಬರಲೇಬೇಕು. ಇಲ್ಲದಿದ್ದರೆ ನಮ್ಮ ಹಿರಿಯರ ತ್ಯಾಗ ಬಲಿದಾನಗಳಿಗೆ ಅರ್ಥವೇ ಇರುವುದಿಲ್ಲ. ಸ್ವಾತಂತ್ರ್ಯ ಎಂಬುದು ಮನುಷ್ಯರ ಜೀವಕ್ಕಿಂತ ಮಿಗಿಲು ಎಂದು ಸ್ವಾತಂತ್ರ್ಯ ಹೋರಾಟಗಾರರು ಭಾವಿಸಿದ್ದರು. ಆದ್ದರಿಂದಲೇ ಎಲ್ಲ ಮಹನೀಯರು ತಮ್ಮ ಸರ್ವಸ್ವವನ್ನೂ ತ್ಯಾಗ ಮಾಡಿ ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗವಹಿಸಿದ್ದರು. ಅವರ ತ್ಯಾಗ ಬಲಿದಾನಗಳನ್ನು ದೇಶವು ಶ್ರದ್ಧಾಪೂರ್ವಕವಾಗಿ ಸ್ಮರಿಸಲೇಬೇಕು ಎಂದು ಹೆಳಿದ್ದಾರೆ.

Leave a Reply

Your email address will not be published. Required fields are marked *

Trending

Exit mobile version