ಕರಾವಳಿ

ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ದ.ಕ.ಜಿಲ್ಲಾಡಳಿತದ ವತಿಯಿಂದ ನಗರದ ನೆಹರೂ ಮೈದಾನದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರಾಷ್ಟ್ರಧ್ವಜಾರೋಹಣ

Published

on

ಮಂಗಳೂರು ಆ 15(Zoom Karnataka): ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರುವ ಮೊದಲು ನೈತಿಕ ಪೊಲೀಸ್ ಗಿರಿಗೆ ಕಡಿವಾಣ ಹಾಕುತ್ತೇವೆ ಎಂದು ಘೋಷಿಸಿದಂತೆ ಇದೀಗ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಹೆಚ್ಚಿನ ಆದ್ಯತೆ ನೀಡಿದ್ದೇವೆ. ನೈತಿಕ ಪೊಲೀಸ್ ಗಿರಿ ಹೆಸರಿನಲ್ಲಿ ನಡೆಯುವ ದಬ್ಬಾಳಿಕೆ, ಸಾಮಾಜಿಕ ಜಾಲತಾಣಗಳ ಮೂಲಕ ಸುಳ್ಳು ಹರಡಿ ಸೌಹಾರ್ದತೆ ಕೆಡಿಸುವ ವಿಚ್ಚಿದ್ರಕಾರಿ ಶಕ್ತಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಲಾಗುತ್ತಿದೆ. ಈ ಮೂಲಕ ಸಮಾಜದಲ್ಲಿ ಸಾಮರಸ್ಯದ ವಾತಾವರಣ ನಿರ್ಮಾಣ ಮಾಡಲಾಗುತ್ತಿದೆ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ದ.ಕ.ಜಿಲ್ಲಾಡಳಿತದ ವತಿಯಿಂದ ನಗರದ ನೆಹರೂ ಮೈದಾನದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ ಮಾತನಾಡಿದರು.

ದೇಶಪ್ರೇಮ ಯಾವುದೇ ಒಂದು ರಾಜಕೀಯ ಪಕ್ಷ, ವ್ಯಕ್ತಿ ಸಂಘಟನೆಗೆ ಸೀಮಿತವಲ್ಲ. ದೇಶವನ್ನು ಭದ್ರಗೊಳಿಸುವುದು ನಮ್ಮೆಲ್ಲರ ಹೊಣೆ. ಅವರ ದೇಶಪ್ರೇಮ ಕಡಿಮೆ ಇವರ ದೇಶಪ್ರೇಮ ಹೆಚ್ಚು ಎನ್ನುವುದು ಜನರಲ್ಲಿ ವ್ಯತ್ಯಾಸಕ್ಕೆ ಕಾರಣವಾಗಿದೆ. ಯಾವುದೇ ತತ್ವ ಸಿದ್ಧಾಂತ ಇನ್ನೊಂದು ಸಿದ್ಧಾಂತದಿಂದ ದೊಡ್ಡದಲ್ಲ. ನಾವು ಸರಿ ಅವರು ತಪ್ಪು ಎನ್ನುವ ಮಾತು ಕೇಳಿ ಬರುತ್ತಿರುವುದು ಖಂಡನೀಯ. ನಮ್ಮ ಮೂಲಭೂತ ಹಕ್ಕು ಮತ್ತು ಸ್ವತಂತ್ರ

ಅನೇಕ ಕಡೆ ಕಡೆಸುವಂತ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಕಾನೂನು ಕೈಗೆತ್ತಿಗಳ್ಳುವ ಘಟನೆಗಳು ನಡೆಯುತ್ತಿವೆ.‌ಇಂತಹ‌ ಘಟನೆಗಳು ನಡೆಯುತ್ತಿರುವುದು ವಿಷಾದನೀಯ. ಒಂದು ಕಡೆ ಕಾನೂನು ವ್ಯವಸ್ಥೆ ಕಾಪಾಡಬೇಕು ಇನ್ನೊಂದು ಕಡೆ ಜನರ ವಿಶ್ವಾಸ ಗಳಿಸಬೇಕು ಎಂದು ದಿನೇಶ್ ಗುಂಡೂರಾವ್ ಹೇಳಿದರು.

ಈ ಸಂದರ್ಭ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ., ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್, ಎಸ್ಪಿ ರಿಷ್ಯಂತ್, ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು. ಆದರೆ ಮನಪಾ ಮೇಯರ್ ಜಯಾನಂದ ಅಂಚನ್ ಸೇರಿದಂತೆ

ತಡವಾಗಿ ಆಗಮಿಸಿದ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಹೊರತುಪಡಿಸಿ ದ.ಕ.ಜಿಲ್ಲಾ ಸಂಸದ ನಳಿನ್ ಕುಮಾರ್, ಇನ್ನಿತರ ಬಿಜೆಪಿ ನಾಯಕರು ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಅನುಪಸ್ಥಿತರಿದ್ದರು.

Leave a Reply

Your email address will not be published. Required fields are marked *

Trending

Exit mobile version