ಮಂಗಳೂರು ಆ 15(Zoom Karnataka): ರಾಜ್ಯ ಗೃಹಸಚಿವರು ಆಗಸ್ಟ್ 15 ರೊಳಗೆ ಡ್ರಗ್ಸ್ ಮುಕ್ತ ಮಂಗಳೂರು ಮಾಡಬೇಕೆಂದು ತಿಳಿಸಿದರು. ಈ ನಿಟ್ಟಿನಲ್ಲಿ ಮಂಗಳೂರು ಪೊಲೀಸರಿಗೆ ಸ್ಪಷ್ಟ ಸೂಚನೆ ನೀಡಲಾಗಿತ್ತು. ಆದ್ದರಿಂದ ಪೊಲೀಸರು ಹಲವಾರು ಕಠಿಣ ಕ್ರಮಗಳನ್ನು ಕೈಗೊಂಡಿದ್ದಾರೆ. ಡ್ರಗ್ಸ್ ಗೆ ಇರುವ ಸಪ್ಲೈ ಮತ್ತು ಡಿಮಾಂಡ್ ಗೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳಲಾಗಿದೆ ಎಂದು ಮಂಗಳೂರಿನಲ್ಲಿ ದ.ಕ.ಜಿಲ್ಲಾ ಉಸ್ತುವಾರಿ ದಿನೇಶ್ ಗುಂಡೂರಾವ್ ಹೇಳಿದರು.
ಡ್ರಗ್ಸ್ ಕೇಸ್ ನಲ್ಲಿ ಹಲವಾರು ಮಂದಿಯನ್ನು ಬಂಧಿಸಲಾಗಿದೆ. ಕೇಸ್ ಗಳನ್ನು ಹಾಕಲಾಗಿದೆ. ವಿದ್ಯಾರ್ಥಿ ಸಮುದಾಯದಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಪೊಲೀಸರು ಹಮ್ಮಿಕೊಂಡಿದ್ದಾರೆ. ಕಳೆದ ಎರಡು ತಿಂಗಳಲ್ಲಿ ಹಲವಾರು ಡ್ರಗ್ಸ್ ಪೆಡ್ಲರ್ ಗಳನ್ನು ಪೊಲೀಸರು ಬಂಧಿದ್ದಾರೆ. ಅಲ್ಲದೆ ಜಿಲ್ಲೆಯಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣಗಳಿಗೆ ಕಡಿವಾಣ ಹಾಕುವಲ್ಲಿ ಕ್ರಮ ಕೈಗೊಳ್ಳಲಾಗಿದೆ. ಹಿಂಸಾತ್ಮಕ ರೀತಿಯಲ್ಲಿ ಕಾನೂನುಬಾಹಿರಬಾಗಿ ನಡೆದುಕೊಳ್ಳುವವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮವಾಗಿದೆ. ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುತ್ತದೆ. ಕಾನೂನುಬಾಹಿರ ಚಟುವಟಿಕೆಗಳಿಗೆ ಕೈ ಹಾಕುವವರಿಗೆ ಬಿಸಿ ಮುಟ್ಟಿಸುವ ಕೆಲಸ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಭಯ, ಭೀತಿಯ ವಾತಾವರಣ ಸೃಷ್ಟಿಯಾಗಲು ಬಿಡುವುದಿಲ್ಲ.ಯಾರಿಗೂ ಕಾನೂನ ಕೈಗೆತ್ತಿಕೊಳ್ಳಲು ಬಿಡುವುದಿಲ್ಲ. ಸುಳ್ಳು ಮಾಹಿತಿಗಳಿಂದ ಅಪಪ್ರಚಾರದಿಂದ ವಾತಾವರಣ ಕೆಡಿಸಬಾರದು ಎಂದು ಹೇಳಿದರು.
ಪ್ರೋಟೋಕಾಲ್ ವಿಚಾರದಲ್ಲಿ ಶಾಸಕರಲ್ಲಿ ಸೃಷ್ಟಿಯಾಗಿದ್ದ ಗೊಂದಲವನ್ನು ನಿವಾರಿಸಲಾಗಿದೆ. ಯಾವುದೇ ಕಾರ್ಯಕ್ರಮವಾದರೂ ಜಿಲ್ಲಾಮಟ್ಟದಲ್ಲಿರುವ ಸಮಿತಿ ನೀಡುವ ನಿರ್ದೇಶನದಂತೆ ಕಾರ್ಯಕ್ರಮದ ನಡೆಯಬೇಕೆಂದು ಜಿಲ್ಲಾಧಿಕಾರಿಯವರು ಈಗಾಗಲೇ ಸ್ಪಷ್ಟ ಸೂಚನೆ ನೀಡಿದ್ದಾರೆ. ಯಾರು ಬೇಕಾದರೂ ಜಿಲ್ಲಾಧಿಕಾರಿಯವರಿಗೆ ರೆಕಮಂಡೇಶನ್ ಲೆಟರ್ ಕೊಡಬಹುದು. ಯಾವುದು ಸರಿ, ಯಾವುದು ತಪ್ಪು ಎಂದು ನಿರ್ಧರಿಸಿ ಕೆಲಸ ಮಾಡುವುದು ಮುಖ್ಯ. ಈಗೇನು ಗೊಂದಲ ಸೃಷ್ಟಿಯಾಗಿತ್ತು ಮುಂದೆ ಈ ರೀತಿ ಆಗಬಾರದೆಂದು ತಿಳಿಸಿದ್ದೇನೆ. ಪ್ರೊಟೊಕಾಲ್ ಪ್ರಕಾರವೇ ಎಲ್ಲವೂ ನಡೆಯಬೇಕು ಯಾರ ಹಕ್ಕನ್ನು ಕಸಿದುಕೊಳ್ಳುವ ಪ್ರಯತ್ನಗಳು ಮಾಡಲಾಗುತ್ತಿಲ್ಲ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತೇವೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.