ತಾಜಾ ಸುದ್ದಿ

‘ಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ಇದ್ದಂತೆ’- ಬಿಜೆಪಿಗರನ್ನು ಕೆರಳಿಸಿದ ಉದಯನಿಧಿ ಸ್ಟಾಲಿನ್!

Published

on

ಚೆನ್ನೈ, ಸೆ 03 [Zoom Karnataka]: ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಪುತ್ರ ಹಾಗೂ ಡಿಎಂಕೆ ಸಚಿವ ಉದಯನಿಧಿ ಸ್ಟಾಲಿನ್ ಹಾಗೂ ಬಿಜೆಪಿ ನಾಯಕರ ಮಧ್ಯೆ ಸನಾತನ ಯುದ್ಧ ಘೋಷಣೆಯಾಗಿದೆ. ಸನಾತನ ಧರ್ಮದ ಕುರಿತು ಉದಯನಿಧಿ ಸ್ಟಾಲಿನ್ ಆಡಿರೋ ಮಾತು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಿಜೆಪಿ ಐಟಿ ಸೆಲ್ ವಿಭಾಗದ ಮುಖ್ಯಸ್ಥ ಅಮಿತ್ ಮಾಳವೀಯ ಅವರು ಈ ಬಗ್ಗೆ ತೀಕ್ಷ್ಮ ಪ್ರತಿಕ್ರಿಯೆ ನೀಡಿದ್ದು, ಉದಯನಿಧಿ ಸ್ಟಾಲಿನ್‌ ಅವರೂ ಕೂಡ ತಿರುಗೇಟು ಕೊಟ್ಟಿದ್ದಾರೆ.

ಪ್ರಗತಿಪರ ಲೇಖಕರು ಆಯೋಜಿಸಿದ್ದ ‘ಸನಾತನ ನಿರ್ಮೂಲನಾ ಸಮ್ಮೇಳನ’ದಲ್ಲಿ ಉದಯನಿಧಿ ಸ್ಟಾಲಿನ್‌ ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಅವರು, ಈ ಕಾರ್ಯಕ್ರಮದಲ್ಲಿ ಮಾತನಾಡಲು ನನಗೆ ಅವಕಾಶ ನೀಡಿದ್ದಕ್ಕೆ ಧನ್ಯವಾದಗಳು. ನೀವು ಈ ಕಾರ್ಯಕ್ರಮವನ್ನು ಸನಾತನ ವಿರೋಧಿ ಸಮ್ಮೇಳನ ಎನ್ನುವ ಬದಲು ಸನಾತನ ನಿರ್ಮೂಲನಾ ಸಮ್ಮೇಳನ ಎಂದು ಆಯೋಜಿಸಿದ್ದೀರಿ. ಇದಕ್ಕೆ ನನಗೆ ಬಹಳ ಇಷ್ಟವಾಯಿತು. ಕೆಲವು ವಿಚಾರಗಳನ್ನು ನಾವು ವಿರೋಧಿಸುವ ಬದಲು ಅವುಗಳನ್ನು ನಿರ್ಮೂಲನೆ ಮಾಡುವುದೇ ಸರಿ. ಸನಾತನ ಧರ್ಮವನ್ನೂ ನಾವು ವಿರೋಧಿಸುವ ಬದಲು ನಿರ್ಮೂಲನೆ ಮಾಡಬೇಕು ಎಂದು ಉದಯನಿಧಿ ಸ್ಟಾಲಿನ್ ಹೇಳಿದರು.

ಮುಂದುವರಿದು ಮಾತನಾಡಿರುವ ಉದಯನಿಧಿ ಅವರು ಸನಾತನ ಧರ್ಮವು ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ವಿರುದ್ಧವಾಗಿದೆ. ಕೆಲವು ವಿಷಯಗಳನ್ನು ನಾವು ವಿರೋಧಿಸಲು ಸಾಧ್ಯವಿಲ್ಲ, ಅದನ್ನು ರದ್ದುಗೊಳಿಸಬೇಕು. ನಾವು ಡೆಂಗ್ಯೂ, ಮಲೇರಿಯಾ ಅಥವಾ ಕೊವಿಡ್-19 ಅನ್ನು ವಿರೋಧಿಸಲು ಸಾಧ್ಯವಿಲ್ಲ. ಆದ್ರೆ ಇದನ್ನು ನಿರ್ಮೂಲನೆ ಮಾಡಬೇಕು ಎಂದು ಉದಯನಿಧಿ ಸ್ಟಾಲಿನ್ ಹೇಳಿದ್ದಾರೆ. ಉದಯನಿಧಿ ಅವರು ಮಾತನಾಡಿರೋ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡಿದೆ.

Leave a Reply

Your email address will not be published. Required fields are marked *

Trending

Exit mobile version