ತಾಜಾ ಸುದ್ದಿ

ಸೌಜನ್ಯ ಪ್ರಕರಣ ಮರುತನಿಖೆಗೆ ರಾಜ್ಯ ಸರಕಾರಕ್ಕೆ ಕಾನೂನಿನಲ್ಲಿಅವಕಾಶವಿಲ್ಲ- ಸಿ.ಎಂ ಸಿದ್ಧರಾಮಯ್ಯ

Published

on

ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸುವಂತೆ ಒತ್ತಾಯಿಸಿ ದ.ಕ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರ ನಿಯೋಗ ಮುಖ್ಯಮಂತ್ರಿ ಸಿದ್ಧರಾಮಯ್ಯರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.

ಈ ಸಂದರ್ಭ ನಿಯೋಗದೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಲು ರಾಜ್ಯ ಸರಕಾರಕ್ಕೆ ಕಾನೂನಿನಲ್ಲಿ ಅವಕಾಶವಿರುವುದಿಲ್ಲ.

ಈ ವಿಷಯವನ್ನು ಸೌಜನ್ಯಳ ಪೋಷಕರಿಗೆ ನಾನು ತಿಳಿಸಿದ್ದೇನೆ. ಈಗಾಗಲೇ ಕಾನೂನು ಸಲಹೆಯನ್ನು ನಾನು ಪಡೆದಿರುವುದರಿಂದ ಸೌಜನ್ಯಳ ಪೋಷಕರು ಮೇಲ್ಮನವಿ ಸಲ್ಲಿಸಬಹುದು ಅಥವಾ ಸಿಬಿಐ ಮೇಲ್ಮನವಿ ಸಲ್ಲಿಸಲು ಅವಕಾಶವಿರುತ್ತದೆ. ಮತ್ತೊಮ್ಮೆ ನಾನು ಕಾನೂನು ಸಲಹೆ ಪಡೆಯುವುದಾಗಿ ಹೇಳಿದ್ದಾರೆ. ಇದೇ ಸಂದರ್ಭ ಶಾಸಕರ ನಿಯೋಗ ರಾಜ್ಯಪಾಲರಾದ ಥಾವರಚಂದ್ ಗೆಹಲೋತ್ ಅವರನ್ನೂ ಭೇಟಿಯಾಗಿ ಮನವಿ ಅರ್ಪಿಸಿತು.

Leave a Reply

Your email address will not be published. Required fields are marked *

Trending

Exit mobile version