ತಾಜಾ ಸುದ್ದಿ

ಮಂಗಳೂರು ನೂತನ ಪೊಲೀಸ್ ಕಮೀಷನರ್ ಆಗಿ ಅನುಪಮ್ ಅಗರ್ವಾಲ್ ಆಯ್ಕೆ , ಹಾಲಿ ಆಯುಕ್ತ ಕುಲದೀಪ್ ವರ್ಗಾವಣೆ

Published

on

ಮಂಗಳೂರು, ಸೆ 06 (Zoom Karnataka): ನಗರದ ನೂತನ ಪೊಲೀಸ್ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಅನುಪಮ್ ಅಗರ್ವಾಲ್ ಅವರನ್ನು ನೇಮಕ ಮಾಡಲಾಗಿದೆ.

ರಾಜ್ಯ ಸರ್ಕಾರವೂ ಹಾಲಿ ಮಂಗಳೂರು ಪೊಲೀಸ್ ಕಮೀಷನರ್ ಆಗಿರುವ ಕುಲದೀಪ್ ಕುಮಾರ್ ಆರ್ ಜೈನ್ ಅವರು ಸೇರಿದಂತೆ 35 ಐಪಿಎಸ್ ಅಧಿಕಾರಿಗಳನ್ನು ಬೆಳ್ಳಂಬೆಳಗ್ಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕುಲದೀಪ್ ಅವರಿಗೆ ಇನ್ನು ಹುದ್ದೆ ತೋರಿಸಿದರೇ ವರ್ಗಾವಣೆ ಮಾಡಿದೆ. ಕುಲದೀಪ್ ಅವರು ಖಡಕ್ ಆಫೀಸರ್ ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿ ಎಂದು ಹೆಸರುವಾಸಿಯಾಗಿದ್ದರು.

ಇನ್ನು ನೂತನ ಆಯುಕ್ತರಾಗಿರುವ ಅನುಪಮ್ ಅಗರ್ವಾಲ್ 2008-ಬ್ಯಾಚ್ IPS ಅಧಿಕಾರಿಯಾಗಿದ್ದು ಮೂಲತಃ ರಾಜಸ್ಥಾನದ ಜೋಧ್‌ಪುರದವರು. ಈ ಹಿಂದೆ ಕರ್ನಾಟಕ ಪೊಲೀಸ್ ಅಕಾಡೆಮಿಯ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ದಾವಣಗೆರೆಯಲ್ಲಿ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿಯಾಗಿ, ಬೆಳಗಾವಿಯಲ್ಲಿ ಉಪ ಪೊಲೀಸ್ ಆಯುಕ್ತರಾಗಿ, ರಾಮನಗರ ಮತ್ತು ವಿಜಯಪುರದಲ್ಲಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *

Trending

Exit mobile version