ಆಸ್ಟ್ರೇಲಿಯಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ 99 ರನ್‌ಗಳ ಜಯ ಸಾಧಿಸಿದೆ. ಈ ಮೂಲಕ ಸರಣಿ ವಶಪಡಿಸಿಕೊಂಡಿದೆ. ದ್ವಿತೀಯ ಏಕದಿನದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ, ಶುಭಮನ್ ಗಿಲ್ ಮತ್ತು ಶ್ರೇಯಸ್ ಅಯ್ಯರ್ ಶತಕ ಬಾರಿಸುವ ಮೂಲಕ 5 ವಿಕೆಟ್‌ಗೆ 399 ರನ್ ಗಳಿಸಿತು.
ಭಾರತ ಇದೇ ಮೊದಲ ಬಾರಿಗೆ ಆಸ್ಟ್ರೇಲಿಯಾ ವಿರುದ್ಧ 390ಕ್ಕೂ ಹೆಚ್ಚು ರನ್ ಗಳಿಸಿದೆ. ಇದಕ್ಕೂ ಮುನ್ನ 2013ರ ನವೆಂಬರ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ 6 ವಿಕೆಟ್‌ಗೆ 383 ರನ್‌ಗಳ ಗರಿಷ್ಠ ರನ್ ಪೇರಿಸಿತ್ತು. 3 ಪಂದ್ಯಗಳ ಸರಣಿಯಲ್ಲಿ ಭಾರತ ತಂಡ 2-0 ಮುನ್ನಡೆ ಸಾಧಿಸಿದೆ. ಈ ಮೂಲಕ ಸರಣಿಯನ್ನು ವಶಪಡಿಸಿಕೊಂಡಿದೆ.
ಆಸ್ಟ್ರೇಲಿಯಾ ಚೇಸಿಂಗ್ ವೇಳೆ ಮಳೆಯಿಂದ ಪಂದ್ಯ ಸ್ಥಗಿತಗೊಂಡಿತ್ತು. ಆಸ್ಟ್ರೇಲಿಯಾ 9 ಓವರ್‌ಗೆ 2 ವಿಕೆಟ್ ಕಳೆದುಕೊಂಡು 52 ರನ್ ಸಿಡಿಸಿತ್ತು. ಡೇವಿಡ್ ವಾರ್ನರ್ ಅಜೇಯ 26 ಹಾಗೂ ಮಾರ್ನಸ್ ಲಬುಶೆನ್ ಅಜೇಯ 17 ರನ್ ಸಿಡಿಸಿದ್ದರು. ಈ ವೇಳೆ ಸುರಿದ ಮಳೆಯಿಂದ ಪಂದ್ಯ ಸ್ಥಗಿತಗೊಂಡಿತ್ತು. ಆದರೆ ಕೆಲ ಹೊತ್ತು ಮಳೆ ವಕ್ಕರಿಸಿದ ಕಾರಣ ಪಂದ್ಯ ಆರಂಭ ವಿಳಂಬವಾಗಿತ್ತು. ಹೀಗಾಗಿ ಓವರ್ ಕಡಿತಗೊಳಿಸಲಾಗಿತ್ತು.50 ಓವರ್ ಪಂದ್ಯವನ್ನು 33 ಓವರ್‌ಗೆ ಕಡಿತಗೊಳಿಸಲಾಯಿತು. ಇಷ್ಟೇ ಅಲ್ಲ ಆಸ್ಟ್ರೇಲಿಯಾ ಗೆಲುವಿಗೆ 317ರನ್ ಟಾರ್ಗೆಟ್ ನೀಡಲಾಗಿತ್ತು. ಆದರೆ, ಗುರಿ ಮುಟ್ಟುವಲ್ಲಿ ಆಸ್ಟ್ರೇಲಿಯಾ ವಿಫಲವಾಯಿತು. 28.2 ಓವರ್‌ನಲ್ಲಿ 217 ರನ್ ಗಳಿಸಿ, ತನ್ನೆಲ್ಲಾ ವಿಕೆಟ್ ಒಪ್ಪಿಸಿತು.