ಹೊಸ ದಿಲ್ಲಿ ,ಸೆ 26 (Zoom Karnataka) : ಅಕ್ಟೋಬರ್ 1 ಭಾನುವಾರದಂದು ದೇಶಾದ್ಯಂತ ಶ್ರಮದಾನ ಮಾಡಲು ಪ್ರಧಾನಿ ಮೋದಿ ಕರೆ ನೀಡಿದ್ಧಾರೆ. ಜನರು ಸ್ವಯಂ ಪ್ರೇರಿತರಾಗಿ ದೇಶಾದ್ಯಂತ ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕು ಅನ್ನೋದು ಪ್ರಧಾನಿ ಮೋದಿ ಅವರ ಆಶಯವಾಗಿದೆ.
ಅಕ್ಟೋಬರ್ 1 ರಂದು ಬೆಳಗ್ಗೆ 10 ಗಂಟೆಯಿಂದ 11 ಗಂಟೆವರೆಗೆ ದೇಶಾದ್ಯಂತ ಜನರು ಸ್ವಯಂ ಪ್ರೇರಿತರಾಗಿ ಸ್ವಚ್ಛತಾ ಅಭಿಯಾನ ನಡೆಸಲು ಕೇಂದ್ರ ಸರ್ಕಾರ ಕರೆ ನೀಡಬಹುದಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಸಂಬಂಧ ಕೇಂದ್ರ ಸಂಪುಟ ಕಾರ್ಯದರ್ಶಿಗಳು ಕೇಂದ್ರ ಸರ್ಕಾರ ಹಾಗೂ ಎಲ್ಲಾ ರಾಜ್ಯ ಸರ್ಕಾರಗಳ ವಿವಿಧ ಇಲಾಖೆಗಳ ಉನ್ನತಾಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ವಿಜಯ ಕರ್ನಾಟಕ ವೆಬ್ ಸಹೋದರ ಸಂಸ್ಥೆ ಟೈಮ್ ಆಫ್ ಇಂಡಿಯಾಗೆ ಲಭ್ಯವಾಗಿರುವ ಮಾಹಿತಿಗಳ ಅನುಸಾರ ಎಲ್ಲ ಇಲಾಖೆಗಳೂ ಈ ಅಭಿಯಾನದಲ್ಲಿ ಗರಿಷ್ಟ ಭಾಗೀದಾರಿಯನ್ನು ಖಾತ್ರಿ ಪಡಿಸಬೇಕು ಎಂದು ಸೂಚಿಸಲಾಗಿದೆ ಎಂದು ತಿಳಿದು ಬಂದಿದೆ.
ಈ ಕುರಿತಾಗಿ ಮಾತನಾಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ, ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಜನ್ಮ ದಿನಾಚರಣೆಗೂ 1 ದಿನ ಮುನ್ನ, ಈ ಕಾರ್ಯಕ್ರಮ ನಡೆಯಬೇಕಿದ್ದು, ಈ ಮೂಲಕ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರಿಗೆ ಗೌರವ ಅರ್ಪಿಸಬೇಕು ಎಂದು ಕರೆ ನೀಡಿದ್ದಾರೆ.