ರಾಜಕೀಯ

ಮೂರು ವರ್ಷಗಳಿಂದ ಸ್ಥಗಿತಗೊಂಡಿದ್ದ ಕರಾವಳಿ ಉತ್ಸವ ಮತ್ತೆ ಆರಂಭಕ್ಕೆ ಚಿಂತನೆ: ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್

Published

on

ಮಂಗಳೂರು,ನ 02(Zoom Karnataka):  ಕಳೆದ ಮೂರು ವರ್ಷಗಳಿಂದ ನಿಂತಿರುವ ಕರಾವಳಿ ಉತ್ಸವವನ್ನು ಪ್ರಸಕ್ತ ವರ್ಷ ನಡೆಸುವ ಬಗ್ಗೆ ಚಿಂತಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕರಾವಳಿ ಉತ್ಸವದಲ್ಲಿ ಜನಾಕರ್ಷಣೀಯ ಕಾರ್ಯಕ್ರಮಗಳಿಗೆ ಒತ್ತು ನೀಡಬೇಕು ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳನ್ನು ಜೊತೆಗೂಡಿಸಿ ಈಗಿನ ಅಭಿರುಚಿಗೆ ತಕ್ಕಂತೆ ಕಾರ್ಯಕ್ರಮಗಳನ್ನು ರೂಪಿಸಿಕೊಳ್ಳುವುದು ಉತ್ತಮವಾಗಿದೆ ಎಂದು ಅವರು ಹೇಳಿದರು.

ಜಿಲ್ಲೆಯಲ್ಲಿ ಸಾಕಷ್ಟು ಶಿಕ್ಷಣ ಸಂಸ್ಥೆಗಳಿವೆ ಇವುಗಳನ್ನು ಬಳಸಿಕೊಂಡು ವಿದ್ಯಾರ್ಥಿಗಳ ಸಾಂಸ್ಕøತಿಕ ಉತ್ಸವವನ್ನು ನಡೆಸಬಹುದಾಗಿದೆ. ಗುಣಮಟ್ಟದ ಕಾರ್ಯಕ್ರಮಗಳಿಗೆ ಅದ್ಯತೆ ನೀಡಬೇಕು ಹೊರಗಿನ ಕಲಾವಿದರಿಗೆ, ಸ್ಥಳೀಯರಿಗೆ ಆಧ್ಯತೆ ನೀಡಬೇಕಿದೆ ಎಂದು ಹೇಳಿದರು.

ಕರಾವಳಿ ಉತ್ಸವವನ್ನು 10 ದಿನದ ಬದಲು ಮೂರು ದಿನಗಳಿಗೆ ಸೀಮಿತಗೊಳಿಸಿ ಹೆಚ್ಚು ಗುಣಮಟ್ಟದ ಹಾಗೂ ಜನಾಕರ್ಷಣೆಯ ಕಾರ್ಯಕ್ರಮಗಳಿಗೆ ಒತ್ತು ನೀಡುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಅವರು ಹೇಳಿದರು. ಕರಾವಳಿ ಉತ್ಸವದ ಬಗ್ಗೆ ಮುಂದಿನ ದಿನಗಳಲ್ಲಿ ಸಭೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.

Leave a Reply

Your email address will not be published. Required fields are marked *

Trending

Exit mobile version