ಕ್ರೈಂ ನ್ಯೂಸ್

ಹೋಟೆಲ್‌ನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ; ಐವರ ಬಂಧನ

Published

on

ಆಗ್ರಾದ ಹೋಟೆಲ್​ವೊಂದರಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಯುವತಿಗೆ ಮದ್ಯ ಸೇವಿಸುವಂತೆ ಒತ್ತಾಯಿಸಿ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದೆ. ತನ್ನ ಸ್ನೇಹಿತ ಮತ್ತು ಇತರ ಕೆಲವರು ತನಗೆ ಬಲವಂತವಾಗಿ ಕುಡಿಯಲು ಒತ್ತಾಯಿಸಿದರು ಎಂದು ಯುವತಿ ಪೊಲೀಸರಿಗೆ ತಿಳಿಸಿದ್ದಾಳೆ, ಮೊದಲು ಕೋಣೆಯೊಳಗೆ ಎಳೆದೊಯ್ದರು ಮತ್ತು ಪ್ರತಿಭಟಿಸಲು ಮುಂದಾದಾಗ ಕೆಲವರು ಹಲ್ಲೆ ಮಾಡಿದ್ದಾರೆ ಎಂದು ಯುವತಿ ಹೇಳಿಕೊಂಡಿದ್ದಾಳೆ.

ಈ ಸಂಬಂಧ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಅತ್ಯಾಚಾರ, ಹಲ್ಲೆ ಮತ್ತು ಇತರ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಪುರುಷರು ಹಾಗೂ ಓರ್ವ ಮಹಿಳೆಯನ್ನು ಬಂಧಿಸಲಾಗಿದೆ. ಅತ್ಯಾಚಾರ ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ.

ಸಂತ್ರಸ್ತ ಮಹಿಳೆ ಒಂದೂವರೆ ವರ್ಷದಿಂದ ಅದೇ ಹೋಟೆಲ್​ನಲ್ಲಿ ಉದ್ಯೋಗಿಯಾಗಿದ್ದಳು. ವಿಡಿಯೋದಲ್ಲಿ ಓರ್ವ ವ್ಯಕ್ತಿಯು ಕೋಣೆಗೆ ಆಕೆಯನ್ನು ಎಳೆದುಕೊಂಡು ಹೋಗುತ್ತಿರುವುದು ಹಾಗೂ ಸಹಾಯಕ್ಕಾಗಿ ಮನವಿ ಮಾಡುತ್ತಿರುವುದು ಕಂಡುಬಂದಿದೆ.

ತನ್ನನ್ನು ಬಲವಂತವಾಗಿ ಕೋಣೆಗೆ ಕರೆದೊಯ್ದು, ಅಮಾನುಷವಾಗಿ ಥಳಿಸಲಾಗಿದೆ ಎಂದು ಮಹಿಳೆ ಪೊಲೀಸರಿಗೆ ತಿಳಿಸಿದ್ದಾರೆ. ಆರೋಪಿಗಳು ಆಕೆಗೆ ಮದ್ಯ ಸೇವಿಸುವಂತೆ ಒತ್ತಾಯಿಸಿದ್ದಾರೆ. ಮಹಿಳೆ ತಲೆಯಲ್ಲಿ ರಕ್ತಸ್ರಾವವಾಗುತ್ತಿತ್ತು. ಆರೋಪಿಯೊಬ್ಬ ಮದ್ಯದ ಬಾಟಲಿಯಿಂದ ಆಕೆಯ ತಲೆಗೆ ಹೊಡೆದಿದ್ದಾನೆ ಎಂದು ಹೇಳಲಾಗಿದೆ.

Leave a Reply

Your email address will not be published. Required fields are marked *

Trending

Exit mobile version