ತಾಜಾ ಸುದ್ದಿ

ಬೆಂಗಳೂರು ಕಂಬಳಕ್ಕೆ 1 ಕೋಟಿ ರೂ. ಅನುದಾನ ಘೋಷಿಸಿದ ಸಿಎಂ: ಐಶ್ವರ್ಯಾ ರೈ, ಅನುಷ್ಕಾ ಶೆಟ್ಟಿ ಸೇರಿ ಹಲವರು ಭಾಗಿ

Published

on

ಬೆಂಗಳೂರು ,ನ 15(Zoom Karnataka): ಇದೇ ಪ್ರಥಮ ಬಾರಿಗೆ ಬೆಂಗಳೂರಿನಲ್ಲಿ ನಡೆಯಲಿರುವ ‘ಬೆಂಗಳೂರು ಕಂಬಳ’ಕ್ಕೆ ಕನಿಷ್ಠ 3ರಿಂದ 5 ಲಕ್ಷ ಜನರು ಬರುವ ಹಿನಿರೀಕ್ಷೆ ಇದ್ದು, ಅದಕ್ಕೆ ತಕ್ಕಂತೆ ತಯಾರಿ ಮಾಡಿಕೊಳ್ಳಲಾಗುತ್ತಿದೆ ಎಂದು ಬೆಂಗಳೂರು ಕಂಬಳ ಸಮಿತಿ (ರಿ.) ಗೌರವಾಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ ಹೇಳಿದರು.

ನ. 25, 26ರಂದು ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳ ತಯಾರಿ ಸಲುವಾಗಿ ಇಂದು ಬೆಂಗಳೂರಿನ ಬಂಟರ ಸಂಘದಲ್ಲಿ ಕರಾವಳಿಯ ವಿವಿಧ ಜಾತಿ-ಭಾಷಾ ಸಂಘಟನೆಗಳ ಜೊತೆ ನಡೆದ ಬೃಹತ್ ಸಮಾಲೋಚನಾ ಸಭೆ ಬಳಿಕ ಆಯೋಜಿಸಿದ ಬಹಿರಂಗ ಸಮಾವೇಶದಲ್ಲಿ ಅವರು ಈ ವಿಷಯ ತಿಳಿಸಿದರು.

ಬೆಂಗಳೂರು ಕಂಬಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 1 ಕೋಟಿ ರೂ. ಅನುದಾನ ಘೋಷಿಸಿದ್ದಾರೆ ಎಂದು ಕಂಬಳ ಸಮಿತಿ ಉಪಾಧ್ಯಕ್ಷ ಗುಣರಂಜನ್ ಶೆಟ್ಟಿ ತಿಳಿಸಿದ್ದಾರೆ.

ಕಂಬಳಕ್ಕೆ ಬಾಲಿವುಡ್ ನಟಿ ಐಶ್ವರ್ಯಾ ರೈ, ಕರಾವಳಿ ಬೆಡಗಿ ಅನುಷ್ಕಾ ಶೆಟ್ಟಿ ಸೇರಿದಂತೆ ವಿವಿಧ ಚಿತ್ರರಂಗಗಳಲ್ಲಿ ಇರುವ ಕರಾವಳಿ ಮೂಲದ ಸಿನಿಮಾ ತಾರೆಯರು ಆಗಮಿಸಲಿದ್ದಾರೆ ಎಂದು ಸಮಿತಿ ಸಂಘಟನಾ ಅಧ್ಯಕ್ಷ ಉಮೇಶ್ ಶೆಟ್ಟಿ ತಿಳಿಸಿದ್ದಾರೆ.

ಕಂಬಳ ಬೆಂಗಳೂರಿನ ಅರಮನೆ ಮೈದಾನದ 70 ಎಕರೆ ಜಾಗದಲ್ಲಿ ನಡೆಯಲಿದೆ. ಈಗಾಗಲೇ 150ಕ್ಕೂ ಅಧಿಕ ಕೋಣಗಳ ನೋಂದಣಿ ಆಗಿದ್ದು, ಆ ಎಲ್ಲ ಕೋಣಗಳನ್ನು ನ.23ರಂದು ಉಪ್ಪಿನಂಗಡಿಯಲ್ಲಿ ಬೀಳ್ಕೊಡುಗೆ ಮಾಡಿ ಕಳಿಸಿಕೊಡಲಾಗುವುದು ಎಂದು ಕಂಬಳ ಸಮಿತಿ ಅಧ್ಯಕ್ಷ, ಶಾಸಕ ಅಶೋಕ್ ರೈ ತಿಳಿಸಿದರು.

Leave a Reply

Your email address will not be published. Required fields are marked *

Trending

Exit mobile version