ತಾಜಾ ಸುದ್ದಿ

ನೂತನ ರಾಜ್ಯಾಧ್ಯಕ್ಷರಾದ ಸನ್ಮಾನ್ಯ ಶ್ರೀ ವಿಜಯೇಂದ್ರ ಯಡಿಯೂರಪ್ಪ ರವರನ್ನು ಶುಭ ಹಾರೈಸಿದ – ಕಾಮತ್

Published

on

ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಸಂಘಟಿಸಿ ಸಮರ್ಥವಾಗಿ ಮುನ್ನಡೆಸಿದ ಜಿಲ್ಲೆಯ ಸಂಸದರಾದ ಸನ್ಮಾನ್ಯ ಶ್ರೀ ನಳಿನ್ ಕುಮಾರ್ ಕಟೀಲ್ ಅವರು ರಾಜ್ಯಾಧ್ಯಕ್ಷದ ಸ್ಥಾನದ ಜವಾಬ್ದಾರಿಯನ್ನು ಯುವ ನಾಯಕ ಶ್ರೀ ವಿಜಯೇಂದ್ರ ಯಡಿಯೂರಪ್ಪ ನವರಿಗೆ ಹಸ್ತಾಂತರಿಸಿದ್ದು ನೂತನ ರಾಜ್ಯಾಧ್ಯಕ್ಷರಿಗೆ ಹಾರ್ದಿಕ ಅಭಿನಂದನೆಗಳು ಎಂದು ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ಡಿ.ವೇದವ್ಯಾಸ್ ಕಾಮತ್ ಅವರು ತಿಳಿಸಿದರು.

ಬೆಂಗಳೂರಿನ ರಾಜ್ಯ ಬಿಜೆಪಿ ಕಚೇರಿಯ ಪದಗ್ರಹಣ ಸಮಾರಂಭದಲ್ಲಿ ನೂತನ ರಾಜ್ಯಾಧ್ಯಕ್ಷರಾದ ಸನ್ಮಾನ್ಯ ಶ್ರೀ ವಿಜಯೇಂದ್ರ ಯಡಿಯೂರಪ್ಪ ರವರನ್ನು ಭೇಟಿ ಮಾಡಿ ಶುಭ ಹಾರೈಸಲಾಯಿತು. ಪಕ್ಷ ತಳಮಟ್ಟದಿಂದ ಮತ್ತೆ ಸದೃಢಗೊಳ್ಳಲಿದೆ, ಮುಂದಿನ ದಿನಗಳಲ್ಲಿ ಭಾರತೀಯ ಜನತಾ ಪಾರ್ಟಿ ಎಲ್ಲೆಡೆ ಅಭೂತಪೂರ್ವ ಯಶಸ್ಸು ಸಾಧಿಸಲಿದೆ ಎಂದು ಇದೇ ವೇಳೆ ಶಾಸಕರು ವಿಶ್ವಾಸ ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *

Trending

Exit mobile version