ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಆರನೇ ವಿಶ್ವ ಕಿರೀಟ ಮುಡಿಗೇರಿಸಿಕೊಂಡಿದೆ.
ಟಾಸ್ ಸೋತು ಬ್ಯಾಟಿಂಗ್ ಗೆ ಬಂದ ಭಾರತ ತಂಡ ಉತ್ತಮ ಆರಂಭ ಪಡೆಯಿತು. ಆರಂಭಿಕ ಶುಭಮನ್ ಗಿಲ್ 4 ರನ್ ಗೆ ಔಟ್ ಆಗುವ ಮೂಲಕ ಆರಂಭಿಕ ಆಘಾತ ನೀಡಿದರು.
47 ರನ್ ಗಳಿಸಿದ ರೋಹಿತ್ ಶರ್ಮಾ ಸ್ವಲ್ಪ ಮಟ್ಟಿಗೆ ಭರವಸೆ ಮೂಡಿಸಿದರೂ, ಗ್ಲೆನ್ ಮ್ಯಾಕ್ಸ್ವೆಲ್ ಗೆ ವಿಕೆಟ್ ಒಪ್ಪಿಸಿದರು.
ವಿರಾಟ್ ಕೊಹ್ಲಿ 4 ಬೌಂಡರಿ ಸಹಿತ 54 ರನ್ ಗಳಿಸಿದರು. ಕೆ ಎಲ್ ರಾಹುಲ್ 66 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಸೂರ್ಯ ಕುಮಾರ್ ಯಾದವ್ 18 ರನ್ ಗಳಿಸಿದರು. ರವೀಂದ್ರ ಜಡೇಜಾ 9, ಮುಹಮ್ಮದ್ ಶಮಿ 6, ಬೂಮ್ರಾ ಕೇವಲ 1 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಕುಲ್ ದೀಪ್ ಯಾದವ್ 10, ಮುಹಮ್ಮದ್ ಸಿರಾಜ್ 9 ರನ್ ಗಳಿಸಿದರು.
ಮಿಷೆಲ್ ಸ್ಟಾರ್ಕ್ 3 ಜೋಸ್ ಹೇಝಲ್ವುಡ್, ಪ್ಯಾಟ್ ಕಮ್ಮಿನ್ಸ್ ತಲಾ 2, ಗ್ಲೆನ್ ಮ್ಯಾಕ್ಸ್ ವೆಲ್, ಝಂಪಾ ತಲಾ 1 ವಿಕೆಟ್ ಪಡೆದರು.
ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ 47 ರನ್ಗೆ ಆರಂಭದ 3 ವಿಕೆಟ್ ಕಳೆದುಕೊಂಡಿತು.
ಬಳಿಕ ವಿಕೆಟ್ ಕಬಳಿಸುವಲ್ಲಿ ಭಾರತ ಸೋತಿತು.
ಶಮಿ 1 ವಿಕೆಟ್ ಕಿತ್ತರೆ, ಬೂಮ್ರಾ 2, ಸಿರಾಜ್ 1 ಕಬಳಿಸಿದರು.