ಮನೋರಂಜನೆ

ಚಂದನ್ ಶೆಟ್ಟಿ-ನಿವೇದಿತಾ ಗೌಡ ದಾಂಪತ್ಯದಲ್ಲಿ ಬಿರುಕು – ಡೈವೋರ್ಸ್ ಗೆ ಅರ್ಜಿ ಸಲ್ಲಿಸಿದ ಜೋಡಿ

Published

on

ಬೆಂಗಳೂರು, ಜೂ. 08(Zoom Karnataka): ಸಂಗೀತ ನಿರ್ದೇಶಕ, ಗಾಯಕ ಚಂದನ್ ಶೆಟ್ಟಿ ಹಾಗೂ ನಟಿ ನಿವೇದಿತಾ ಗೌಡ ಅವರ ಸಂಸಾರದಲ್ಲಿ ಬಿರುಕುಂಟಾಗಿದ್ದು, ವಿಚ್ಚೇದನಕ್ಕಾಗಿ ಬೆಂಗಳೂರಿನ ಶಾಂತಿನಗರದ ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗುತ್ತಿದೆ.

ಪರಸ್ಪರ ಪ್ರೀತಿಸಿ ಮದುವೆಯಾಗಿದ್ದ ಚಂದನ್ ಶೆಟ್ಟಿ ಹಾಗು ನಿವೇದಿತಾ ಗೌಡ ಅವರ ನಡುವೆ ವೃತ್ತಿಜೀವನಕ್ಕೆ ಸಂಬಂಧಿಸಿದಂತೆ ಮನಸ್ಥಾಪ ಉಂಟಾಗಿರುವ ಸಾಧ್ಯತೆ ಇದೆ. ಹೀಗಾಗಿ ಅವರು ಇಂದು ವಿಚ್ಛೇದನ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಈ ಜೋಡಿಯ ವಿಚ್ಛೇದನದ ಕುರಿತು ಅಧಿಕೃತ ಮಾಹಿತಿ ಹೊರಬೀಳುವುದು ಬಾಕಿ ಇದೆ.

ಸಾಮಾಜಿಕ ಜಾಲತಾಣದಲ್ಲಿ ಸಖತ್ ಆ್ಯಕ್ಟಿವ್ ಆಗಿರುವ ನಿವೇದಿತಾ ಅವರು, ಆಗಾಗ ಹೊಸ ಹೊಸ ರೀಲ್ಸ್ ಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಈ ರೀಲ್ಸ್ ಗಳಿಗೆ ನೆಟ್ಟಿಗರು ಹಲವಾರು ರೀತಿಯಾಗಿ ಕಮೆಂಟ್ಸ್ ಗಳನ್ನು ಮಾಡುತ್ತಾರೆ. ಇದರಲ್ಲಿ ಕೆಲವರು ನೆಗೆಟಿವ್ ಕಮೆಂಟ್ಸ್ ಮಾಡುವ ಜೊತೆಗೆ ಮಧ್ಯ ಮಧ್ಯ ಚಂದನ್ ಶೆಟ್ಟಿ ಅವರ ಹೆಸರನ್ನೂ ಎಳೆದು ತರುತ್ತಾರೆ. ಈ ಕಾರಣದಿಂದಾಗಿಯೇ ಇವರಿಬ್ಬರ ಸಂಸಾರದಲ್ಲಿ ಬಿರುಕುಂಟಾಗಿರಬಹುದೇ ಎಂಬ ಅನುಮಾನ ಕೆಲವರಲ್ಲಿ ಮೂಡಿದೆ.

ಆದರೆ ಚಂದನ್ ಹಾಗೂ ನಿವೇದಿತಾ ವಿಚ್ಛೇದನಕ್ಕೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಅವರಿಬ್ಬರು ಇಂದು ಫ್ಯಾಮಿಲಿ ಕೋಟ್ ಗೆ ಹಾಜರಾಗಿದ್ದರು. ಇಬ್ಬರೂ ಒಪ್ಪಿಗೆಯ ಮೇರೆಗೆ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗುತ್ತಿದೆ. ಇದೀಗ ಏಕಾಏಕಿ ನಿವೇದಿತಾ ಹಾಗೂ ಚಂದನ್ ಅವರ ವಿಚ್ಛೇದನ ವಿಚಾರ ತಿಳಿದು ಅಭಿಮಾನಿಗಳು ಶಾಕ್ ಆಗಿದ್ದಾರೆ.

Leave a Reply

Your email address will not be published. Required fields are marked *

Trending

Exit mobile version