ಕರಾವಳಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ ( ಜೂ.27) ಶಾಲೆಗಳಿಗೆ ರಜೆ

Published

on

Jun 26 (ZoomKarnataka) – ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ‌ ನಾಳೆ ( ಗುರುವಾರ) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜೂನ್ 27 ರಂದು ರೆಡ್ ಅಲರ್ಟ್ ಘೋಷಣೆಯಾಗಿರುತ್ತದೆ. ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿದೆ. ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜೂನ್ 27 ರಂದು ರಜೆಯನ್ನು ಘೋಷಿಸಲಾಗಿದೆ.
ಅದೇ ರೀತಿ ಸಂಭಾವ್ಯ ಪ್ರವಾಹ/ಭೂಕುಸಿತ ಪ್ರದೇಶಗಳನ್ನು ಗುರುತಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ.

ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಸಾರ್ವಜನಿಕರು/ಪ್ರವಾಸಿಗರು ತೆರಳದಂತೆ ಜಾಗ್ರತೆ ವಹಿಸುವುದು. ಮೀನುಗಾರರು ಸಮುದ್ರಕ್ಕೆ ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ

Leave a Reply

Your email address will not be published. Required fields are marked *

Trending

Exit mobile version