ರಾಜ್ಯ ಸುದ್ದಿ

ಬಾಂಗ್ಲಾದೇಶದಲ್ಲಿರುವ ಹಿಂದೂಗಳ ಸುರಕ್ಷತೆಗೆ ವಿಶ್ವಹಿಂದೂ ಪರಿಷತ್ ಕೂಡ ತುರ್ತು ಸಹಾಯವಾಣಿ ಸ್ಥಾಪಿಸಲು ನಿರ್ಧರಿಸಿದೆ. ಅದರ ಸಂಖ್ಯೆಯನ್ನು ಶೀಘ್ರದಲ್ಲೇ ಬಿಡುಗಡೆ – ಡಾ ಎಂ.ಬಿ ಪುರಾಣಿಕ್

Published

on

ಬಾಂಗ್ಲಾದೇಶದಲ್ಲಿರುವ ಹಿಂದೂಗಳ ಸುರಕ್ಷತೆಗೆ ಕ್ರಮ ಕೈಗೊಳ್ಳಲು ಭಾರತ ಸರಕಾರ ಸಹಿತ ವಿಶ್ವ ಸಮುದಾಯಕ್ಕೆ ಅಗ್ರಹ

ಬಾಂಗ್ಲಾದೇಶದಾದ್ಯಂತ ಪ್ರತಿ ಜಿಲ್ಲೆಯಲ್ಲೂ ನೂರಕ್ಕೂ ಹೆಚ್ಚು ಹಿಂದು ದೇವಾಲಯಗಳಿಗೆ ಭಾರಿ ಪ್ರಮಾಣದ ಹಾನಿಯಾಗಿದೆ

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಸುರಕ್ಷತೆಗಾಗಿ ಮತ್ತು ಅವರ ಮಾನವ ಹಕ್ಕುಗಳನ್ನು ರಕ್ಷಿಸಲು ಪರಿಣಾಮಕಾರಿ ಕ್ರಮ ತೆಗೆದುಕೊಳ್ಳುವುದು ವಿಶ್ವ ಸಮುದಾಯದ ಜವಾಬ್ದಾರಿಯಾಗಿದೆ

ZoomKarnataka ಮಂಗಳೂರು, ಆಗಸ್ಟ್ 9, 2024 ನೆರೆಯ ಬಾಂಗ್ಲಾದೇಶವು ತೀವ್ರ ಹಿಂಸಾಚಾರದಿಂದ ಬಳಲುತ್ತಿದೆ. ಬಾಂಗ್ಲಾದ ಚುನಾಯಿತ ಪ್ರಧಾನಿ ರಾಜೀನಾಮೆ ನೀಡಿ ದೇಶವನ್ನು ತೊರೆದ ನಂತರ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ನಿಷ್ಕ್ರಿಯವಾಗಿದೆ. ಈ ಗೊಂದಲಮಯ ಪರಿಸ್ಥಿತಿಯಲ್ಲಿ ಅಲ್ಲಿನ ತೀವುಗಾಮಿ ಜಿಹಾದಿ ಶಕ್ತಿಗಳು ಹಿಂದೂ ಸಮಾಜದ ಮೇಲೆ ದೊಡ್ಡ ಪ್ರಮಾಣದ ದಾಳಿಯನ್ನು ಪ್ರಾರಂಭಿಸಿವೆ. ಬಾಂಗ್ಲಾದೇಶದಲ್ಲಿ ಕಳೆದ ಹಲವಾರು ದಿನಗಳಿಂದ ಹಿಂದೂ ಧಾರ್ಮಿಕ ಸ್ಥಳಗಳು, ಹಿಂದೂ ವ್ಯಾಪಾರ ಸಂಸ್ಥೆಗಳು ಮತ್ತು ಹಿಂದೂಗಳ ಮನೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಯುತ್ತಿದೆ. ಕ್ರೂರವಾಗಿ ಹಿಂದುಗಳನ್ನು ಹಿಂಸಿಸುವ ಮೂಲಕ ಅಲ್ಲಿನ ಅಲ್ಪಸಂಖ್ಯಾಕ ಹಿಂದೂಗಳ ಮಾನವ ಹಕ್ಕು ಹಾಗೂ ಧಾರ್ಮಿಕ ಹಕ್ಕಿಗೆ ಚ್ಯುತಿ ಬರುತ್ತಿದ್ದು ಬಾಂಗ್ಲಾದೇಶದಾದ್ಯಂತ ಪ್ರತಿ ಜಿಲ್ಲೆಯಲ್ಲೂ ನೂರಕ್ಕೂ ಹೆಚ್ಚು ಹಿಂದು ದೇವಾಲಯಗಳಿಗೆ ಭಾರಿ ಪ್ರಮಾಣದ ಹಾನಿಯಾಗಿದೆ. ಹಿಂಸಾಚಾರ ಮತ್ತು ಭಯೋತ್ಪಾದನೆಯ ಗುರಿಯಾಗದ ಯಾವುದೇ ಜಿಲ್ಲೆ ಬಾಂಗ್ಲಾದೇಶದಲ್ಲಿ ಉಳಿದಿಲ್ಲ. ಕಾಲಕಾಲಕ್ಕೆ ಸಂಭವಿಸುವ ಇಂತಹ ಗಲಭೆಗಳ ಪರಿಣಾಮ ವಿಭಜನೆಯ ಸಮಯದಲ್ಲಿ ಬಾಂಗ್ಲಾದೇಶದಲ್ಲಿ 32% ರಷ್ಟಿದ್ದ ಹಿಂದೂಗಳು ಈಗ 8% ಕ್ಕಿಂತ ಕಡಿಮೆ ಇದ್ದಾರೆ ಮತ್ತು ಅವರು ನಿರಂತರ ಜಿಹಾದಿ ಕಿರುಕುಳಕ್ಕೆ ಬಲಿಯಾಗುತ್ತಿದ್ದಾರೆ.

ಹಿಂದು ಭಾಂದವರ ಮನೆಗಳು, ಮಠಗಳು,ಅಂಗಡಿಗಳು, ಕಚೇರಿಗಳು, ವಾಣಿಜ್ಯ ಸಂಸ್ಥೆಗಳು ಮತ್ತು ಮಹಿಳೆಯರು, ಮಕ್ಕಳು ಮತ್ತು ಅವರ ನಂಬಿಕೆ ಮತ್ತು ಶ್ರದ್ಧಾ ಕೇಂದ್ರಗಳು ಬಾಂಗ್ಲಾದೇಶದಲ್ಲಿ ಸುರಕ್ಷಿತವಾಗಿಲ್ಲ. ಅಲ್ಲಿನ ತುಳಿತಕ್ಕೊಳಗಾದ ಅಲ್ಪಸಂಖ್ಯಾತ ಹಿಂದೂಗಳ ಸ್ಥಿತಿ ತುಂಬಾ ಹದಗೆಡುತ್ತಿರುಹುದು ಆತಂಕಕಾರಿಯಾಗಿದೆ.

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಸುರಕ್ಷತೆಗಾಗಿ ಮತ್ತು ಅವರ ಮಾನವ ಹಕ್ಕುಗಳನ್ನು ರಕ್ಷಿಸಲು ಪರಿಣಾಮಕಾರಿ ಕ್ರಮ ತೆಗೆದುಕೊಳ್ಳುವುದು ವಿಶ್ವ ಸಮುದಾಯದ ಜವಾಬ್ದಾರಿಯಾಗಿದೆ . ಭಾರತವು ಸಾಂಪ್ರದಾಯಿಕವಾಗಿ ಪ್ರಪಂಚದಾದ್ಯಂತ ಕಿರುಕುಳಕ್ಕೊಳಗಾದ ವಲಸಿಗರಿಗೆ ಸಹಾಯ ಮಾಡಿಕೊಂಡು ಬಂದಿರುವಂತೆ ಬಾಂಗ್ಲಾದೇಶದಲಿರುವ ಹಿಂದೂ ಅಲ್ಪಸಂಖ್ಯಾತರ ರಕ್ಷಣೆಗೆ ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುವಂತೆ ವಿಶ್ವ ಹಿಂದೂ ಪರಿಷತ್ ಭಾರತ ಸರ್ಕಾರವನ್ನು ಒತ್ತಾಯಿಸುತ್ತದೆ.

ಭೀಕರ ಪರಿಸ್ಥಿತಿಯ ಲಾಭವನ್ನು ಪಡೆದುಕೊಂಡು, ಗಡಿಯಾಚೆಯಿಂದ ಜಿಹಾದಿಗಳು ಭಾರತಕ್ಕೆ ಒಳನುಸುಳುವಿಕೆ ಪ್ರಯತ್ನವನ್ನು ಮಾಡಬಹುದು. ಇದನ್ನು ಭಾರತ ಸರಕಾರ ಗಂಭೀರವಾಗಿ ಪರಿಗಣಿಸಿ
ನಮ್ಮ ಭದ್ರತಾ ಪಡೆಗಳ ಮೂಲಕ ಭಾರತ ಬಾಂಗ್ಲಾದೇಶ ಗಡಿ ಪ್ರದೇಶದಲ್ಲಿ ಕಟ್ಟುನಿಟ್ಟಾದ ಕ್ರಮ ಕೈಗೊಳ್ಳಬೇಕು ಹಾಗೂ ಯಾವುದೇ ರೀತಿಯ ಅತಿಕ್ರಮಣಕ್ಕೆ ಅವಕಾಶ ನೀಡಬಾರದು.

ಈಗಾಗಲೇ ಅಸ್ತಿತ್ವಕ್ಕೆ ಬಂದಿರುವ ಬಾಂಗ್ಲಾದ ಹೊಸ ಸರ್ಕಾರ ಅಲ್ಲಿನ ಹಿಂದೂ ಅಲ್ಪಸಂಖ್ಯಾತ ಸಮುದಾಯಕ್ಕೆ ರಕ್ಷಣೆ ಕೊಡಬೇಕು ಹಾಗೂ ದಾಳಿಯಿಂದ ನಾಶಗೊಂಡಿರುವ ಹಿಂದೂ ಮನೆಗಳು ಹಾಗೂ ದೇವಾಲಯಗಳನ್ನು ಪುನರ್ ನಿರ್ಮಿಸಲು ಬೇಕಾದ ಕ್ರಮಗಳನ್ನು ತೆಗೆದುಕೊಳ್ಳಲು ಭಾರತ ಸರಕಾರ ಸಹಿತ ವಿಶ್ವ ಸಮುದಾಯ ಬಾಂಗ್ಲಾದೇಶದ ಸರ್ಕಾರಕ್ಕೆ ಒತ್ತಾಹಿಸಬೇಕೆಂದು ವಿಶ್ವ ಹಿಂದೂ ಪರಿಷದ್ ಅಗ್ರಹಿಸುತ್ತದೆ.

ಭಾರತದ ಗೌರವಾನ್ವಿತ ಗೃಹ ಸಚಿವ ಶ್ರೀ ಅಮಿತ್ ಶಾ ಅವರನ್ನು ವಿಶ್ವ ಹಿಂದೂ ಪರಿಷತ್ತಿನ ಕೇಂದ್ರೀಯ ಮುಖಂಡರು ಭೇಟಿ ಮಾಡಿ ಬಾಂಗ್ಲಾದೇಶದ ಹಿಂದೂಗಳ ಸುರಕ್ಷತೆ ಮತ್ತು ಭದ್ರತೆಗಾಗಿ ತಕ್ಷಣದ ಅನಿವಾರ್ಯ ಕ್ರಮಕ್ಕಾಗಿ ವಿನಂತಿಸಿದರು. ಕೂಡಲೇ ಹಿಂದೂಗಳ ರಕ್ಷಣೆಗೆ ಸೂಕ್ತ ಕ್ರಮ ಕೈಗೊಳ್ಳುವ ಭರವಸೆಯನ್ನು ಗೃಹ ಸಚಿವರು ವ್ಯಕ್ತಪಡಿಸಿದ್ದಾರೆ. ಮತ್ತು ಈ ನಿಟ್ಟಿನಲ್ಲಿ ವಿಶ್ವ ಹಿಂದೂ ಪರಿಷತ್ ಕೂಡ ತುರ್ತು ಸಹಾಯವಾಣಿ ಸ್ಥಾಪಿಸಲು ನಿರ್ಧರಿಸಿದೆ. ಅದರ ಸಂಖ್ಯೆಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು.
ಡಾ ಎಂಬಿ ಪುರಾಣಿಕ್ ಪ್ರಾಂತ ಕಾರ್ಯಾಧ್ಯಕ್ಷರು, ಎಚ್ ಕೆ ಪುರುಷೋತ್ತಮ ಜಿಲ್ಲಾಧ್ಯಕ್ಷರು

ಶಿವಾನಂದ್ ಮೆಂಡನ್ ವಿಭಾಗ ಸಹಕಾರ್ಯದರ್ಶಿಗಳು, ಭುಜಂಗ ಕುಲಾಲ್ ಪ್ರಾಂತ ಸಹಸಂಯೋಜಕ್

ರವಿ ಅಸೈಗೋಳಿ ಜಿಲ್ಲಾ ಕಾರ್ಯದರ್ಶಿ ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

Trending

Exit mobile version