ತಾಜಾ ಸುದ್ದಿ

ನಕಲಿ ಸಹಿ ಆರೋಪದಡಿ ಸಿಲುಕಿದ ಸಿಎಂ ಪತ್ನಿ ವಿರುದ್ಧ ದೂರು ದಾಖಲು

Published

on

ಮೈಸೂರು, ಆ.28(Zoom Karnataka):ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ವಿರುದ್ಧ ಮೈಸೂರಿನಲ್ಲಿ ದೂರು ದಾಖಲಾಗಿದೆ.

ನಕಲಿ ಸಹಿ ವಿಚಾರವಾಗಿ ಪಾರ್ವತಿ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಬುಧವಾರ ದೂರು ನೀಡಿದ್ದಾರೆ. ನಕಲಿ ದಾಖಲೆ ಸೃಷ್ಟಿ, ಕಡತ ನಾಶದ ಬಗ್ಗೆ ಸ್ನೇಹಮಯಿ ಕೃಷ್ಣ ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ.

ಪಾರ್ವತಿ ಬರೆದಿದ್ದ ಮೂಲ ಪತ್ರ ನಾಶ ಮಾಡಿ, ಇತ್ತೀಚಿಗೆ ಸೃಷ್ಟಿಸಿರುವ ಪತ್ರವನ್ನು ಕಡತಕ್ಕೆ ಸೇರಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಪತ್ರದಲ್ಲಿರುವ ಪಾರ್ವತಿ ಅವರ ಸಹಿ ಹಾಗೂ ಮಾಹಿತಿ ಹಕ್ಕಿನಲ್ಲಿ ಪಡೆದ ಪತ್ರದಲ್ಲಿ ಇರುವ ಸಹಿ ಬದಲಾವಣೆ ಇದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

Leave a Reply

Your email address will not be published. Required fields are marked *

Trending

Exit mobile version