ಕರಾವಳಿ

ರಮಾನಾಥ ರೈ, ಯು.ಟಿ ಖಾದರ್, ನಳಿನ್ ಕುಮಾರ್ ಕಟೀಲ್ ನನಗೆ ಒಳ್ಳೆಯ ಸ್ನೇಹಿತರು – ದೇವದಾಸ್ ಕಾಪಿಕಾಡ್

Published

on

ನಾನು ಬಿಜೆಪಿ ಸದಸ್ಯತ್ವ ಪಡೆದಿಲ್ಲ

ನಾನು ಯಾವುದೇ ಪಕ್ಷಕ್ಕೂ ಸೇರಿದವನಲ್ಲ

ತುಳು ಕಲಾವಿದ ದೇವದಾಸ್ ಕಾಪಿಕಾಡ್ ಸ್ಪಷ್ಟನೆ


ಮಂಗಳೂರು, ZoomKarnataka, Sep 05 : ನಾನು ಬಿಜೆಪಿ ಸದಸ್ಯತ್ವ ಪಡೆದಿಲ್ಲ ಎಂದು ತುಳು ಕಲಾವಿದ ದೇವದಾಸ್ ಕಾಪಿಕಾಡ್ ಸ್ಪಷ್ಟನೆ ನೀಡಿದ್ದಾರೆ ಎನ್ನಲಾಗುತ್ತಿರುವ ಆಡಿಯೋ ವೈರಲ್ ಆಗುತ್ತಿದೆ.

ನಾನು ಯಾವುದೇ ಪಕ್ಷಕ್ಕೂ ಸೇರಿದವನಲ್ಲ, ಯಾವುದೇ ಪಕ್ಷಕ್ಕೆ ನಾನು ಸೇರ್ಪಡೆಯಾಗಿಲ್ಲ, ಎಲ್ಲಾ ಪಕ್ಷಗಳ ಮುಖಂಡರ ಜೊತೆ ನನಗೆ ಉತ್ತಮ ಸಂಬಂಧ ಇದೆ. ಬಿಜೆಪಿ ನಾಯಕರ ಜೊತೆ ಕೇವಲ ಸೌಹಾರ್ದ ಭೇಟಿ ನಡೆದಿದೆ ಎಂಬ ಸ್ಪಷ್ಟನೆ ಆಡಿಯೋದಲ್ಲಿದೆ.

ಬಿಜೆಪಿ ನಾಯಕರು ಕರೆಮಾಡಿ ನಿಮ್ಮ ಮನೆಗೆ ಬರುತ್ತೇವೆ ಎಂದಾಗ ಬನ್ನಿ ಎಂದು ಹೇಳಿದ್ದೆ. ಕೇವಲ ಸೌಹಾರ್ದ ಭೇಟಿಗಾಗಿ ಮಾತ್ರ ಬನ್ನಿ, ಬೇರೆ ಯಾವುದೇ ತಪ್ಪು ಸಂದೇಶ ಹೋಗಬಾರದು ಅಂತ ನಾನು ಮೊದಲೇ ಬಿಜೆಪಿ ನಾಯಕರಿಗೆ ತಿಳಿಸಿದ್ದೆ, ಅದರಂತೆ ಕೆಲ ಬಿಜೆಪಿ ಮುಖಂಡರು ಮನೆಗೆ ಬಂದು ಭೇಟಿ ಮಾಡಿ ಹೋಗಿದ್ದಾರೆ. ಆದರೆ ಬಂದು ಹೋದ ಮೇಲೆ ಬಿಜೆಪಿ ಸದಸ್ಯತ್ವ ಪಡೆದಿದ್ದೇನೆ ಎಂದು ಅದರಲ್ಲಿದ್ದ ಯಾರೋ ತಪ್ಪು ಸಂದೇಶ ನೀಡಿದ್ದಾರೆ. ಆದರೆ ಅದರಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ವೈರಲ್ ಆಡಿಯೋದಲ್ಲಿ ಹೇಳಲಾಗಿದೆ.

ನಾನೊಬ್ಬ ಕಲಾವಿದ, ಎಲ್ಲಾ ಜಾತಿ ಮತ ಧರ್ಮಗಳ ಜನರು ನನ್ನ ಅಭಿಮಾನಿಗಳಾಗಿದ್ದು ನನ್ನನ್ನು ಪ್ರೀತಿ ಮಾಡುತ್ತಾರೆ, ನನಗೆ ಯಾವ ಪಕ್ಷವೂ ಬೇಕಿಲ್ಲ, ಎಲ್ಲಾ ಪಕ್ಷಗಳ ನಾಯಕರ ಜೊತೆಗೂ ನನಗೆ ಭಾಂದವ್ಯ ಇದೆ, ರಮಾನಾಥ ರೈ, ಯು.ಟಿ ಖಾದರ್, ನಳಿನ್ ಕುಮಾರ್ ಕಟೀಲ್ ನನಗೆ ಒಳ್ಳೆಯ ಸ್ನೇಹಿತರು ಎಂದಿದ್ದಾರೆ. ನನ್ನ ಮನೆಗೆ ಯಾವ ಪಕ್ಷದ ನಾಯಕರು ಬಂದರೂ ಸ್ವಾಗತಿಸಿ ಆತಿಥ್ಯ ನೀಡಿ ಫೋಟೋ ತೆಗಿಸಿಕೊಳ್ಳುತ್ತೇನೆ ಎಂದಿದ್ದಾರೆ.

ದೇವದಾಸ್ ಕಾಪಿಕಾಡ್ ಬಿಜೆಪಿ ಸದಸ್ಯತ್ವ ಪಡೆದಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯು ತನ್ನ ಅಧಿಕೃತ ಫೇಸ್ಬುಕ್ ಪೇಜ್ ನಲ್ಲಿ ಮಾಹಿತಿ ನೀಡಿತ್ತು. ಬಿಜೆಪಿ ನಾಯಕರು ದೇವದಾಸ್ ಕಾಪಿಕಾಡ್ ರನ್ನು ಭೇಟಿಯಾಗಿರುವ ಫೋಟೋ ಸಮೇತ ಪೋಸ್ಟ್ ಮಾಡಲಾಗಿತ್ತು

Leave a Reply

Your email address will not be published. Required fields are marked *

Trending

Exit mobile version