ಕಲಬುರಗಿ ನ.09, (Zoom Karnataka): ದೇವರ ದರ್ಶನಕ್ಕೆ ತೆರಳುತ್ತಿದ್ದ ವೇಳೆ ಮಹಿಂದ್ರಾ ಪಿಕಪ್ ಗೂಡ್ಸ್ ವಾಹನ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಚಾಲಕ ಸೇರಿ ನಾಲ್ವರು ಮೃತಪಟ್ಟ ಘಟನೆ ಕಮಲಾಪುರ ತಾಲೂಕಿನ ಮರಗುತ್ತಿ ಕ್ರಾಸ್ ಬಳಿ ನಡೆದಿದೆ.
ಮೃತಪಟ್ಟವರನ್ನು ಹೈದರಾಬಾದ್ ಮೂಲದ ಭಾರ್ಗವ್ ಕೃಷ್ಣ (55) ಅವರ ಪತ್ನಿ ಸಂಗೀತ (45) ಪುತ್ರ ಉತ್ತಮ್ ರಾಘವನ್ (28) ಎಂದು ಗುರುತಿಸಲಾಗಿದೆ. ಕಾರು ಚಾಲಕನ ಗುರುತು ಪತ್ತೆಯಾಗಿಲ್ಲ.
ಕಾರಿನಲ್ಲಿದ್ದವರು ಗಾಣಗಾಪುರ್ ದತ್ತನ ದರ್ಶನಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. ಸಿಪಿಐ ಶಿವಶಂಕರ್ ಸಾಹು, ಪಿಎಸ್ಐ ಆಶಾ ರಾಥೋಡ್, ಸಿಬ್ಬಂದಿ ಕಿಶನ್, ಕುಪೇಂದ್ರ ಮತ್ತಿತರರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.