ತಾಜಾ ಸುದ್ದಿ

ವಾಹನ ಚಲಾಯಿಸಿದ ಅಪ್ರಾಪ್ತ ಬಾಲಕ: ಮಾಲೀಕರಿಗೆ 25 ಸಾವಿರ ದಂಡ ವಿಧಿಸಿದ ಕೋರ್ಟ್

Published

on

ದಾವಣಗೆರೆ,ಫೆ.03(Zoom Karnataka)ಅಪ್ರಾಪ್ತ ಬಾಲಕ ವಾಹನ ಚಲಾಯಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಹನದ ಮಾಲೀಕರಿಗೆ ಇಪ್ಪತ್ತೈದು ಸಾವಿರ ದಂಡ ವಿಧಿಸಲಾಗಿದೆ. ವಾಹನದ ಮಾಲೀಕರಿಗೆ ಕೋರ್ಟ್​​ ದಂಡ ವಿಧಿಸಿದೆ ಎಂದು ಪೊಲೀಸ್​ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಜ.25 ರಂದು ದಾವಣಗೆರೆ ಟ್ರಾಫಿಕ್​​​ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುತ್ತಿರುವ ವೇಳೆ ಈ ಘಟನೆ ನಡೆದಿದೆ. ಅಪ್ರಾಪ್ತ ಬಾಲಕ ನಗರದ ಎಆರ್​ಜಿ ಕಾಲೇಜ್ ಬಳಿ ಆಕ್ಟಿವ್​ ಹೊಂಡ ಬೈಕ್​ ಚಲಾಯಿಸಿಕೊಂಡು ಬಂದಿದ್ದನ್ನು ಪೊಲೀಸರು ತಡೆದು ಪರಿಶೀಲನೆ ನಡೆಸಿದ್ದಾರೆ. ಬೈಕ್​​ ಅನ್ನು ಜಪ್ತಿ ಮಾಡಿಕೊಂಡು ದಾವಣಗೆರೆ ದಕ್ಷಿಣ ಸಂಚಾರ ಠಾಣೆಯಲ್ಲಿ ಇಂಡಿಯನ್ ಮೋಟಾರ್ ವೆಹಿಕಲ್ ಆಕ್ಟ್ ಅಡಿ ಪ್ರಕರಣ ದಾಖಲಿಸಿಕೊಂಡಿದ್ದೇವೆ ಎಂದು ಪೊಲೀಸ್​ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *

Trending

Exit mobile version