ಮುಂಬೈ, ಏ.12 (Zoom Karnataka): ಬಾಲಿವುಡ್ ನಟ ಹೃತಿಕ್ ರೋಷನ್ಗೆ ನಾಯಕಿಯಾಗಿ ಮತ್ತೆ ದೇಸಿ ಗರ್ಲ್ ಪ್ರಿಯಾಂಕಾ ಚೋಪ್ರಾ ತೆರೆ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ.
ನಟ ಹೃತಿಕ್ ರೋಷನ್ ‘ಕ್ರಿಶ್ 4’ ಸಿನಿಮಾ ಮೂಲಕ ಮೊದಲ ಬಾರಿಗೆ ನಿರ್ದೇಶಿಸುತ್ತಿದ್ದಾರೆ. ‘ಕ್ರಿಶ್ 4’ ಸಿನಿಮಾಗಾಗಿ ಭರ್ಜರಿ ತಯಾರಿ ನಡೆಯುತ್ತಿದ್ದು, ಈ ಸಿನಿಮಾದ ಮುಖ್ಯ ಪಾತ್ರದಲ್ಲಿ ಹೃತಿಕ್ ಜೊತೆಯಾಗಿ ಪ್ರಿಯಾಂಕಾ ಚೋಪ್ರಾ ಕಾಣಿಸಿಕೊಳ್ಳಲಿದ್ದಾರೆ ಎಂಬ ಅಪ್ಡೇಟ್ ದೊರೆತಿದೆ.
ಹಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದ ನಟಿ ಪ್ರಿಯಾಂಕಾ ಚೋಪ್ರಾ ಯಾವಾಗ ಬಾಲಿವುಡ್ ಸಿನಿಮಾದಲ್ಲಿ ನಟಿಸುತ್ತಾರೆ ಎಂದು ಫ್ಯಾನ್ಸ್ ಕಾಯುತ್ತಿದ್ದರು. ಇದೀಗ ‘ಕ್ರಿಶ್ 4’ನಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುವ ಮೂಲಕ ಫ್ಯಾನ್ಸ್ಗೆ ಸಿಹಿಸುದ್ದಿ ನೀಡಿದ್ದಾರೆ.
ಈ ಹಿಂದೆ ‘ಕ್ರಿಶ್’ ಹಾಗೂ ‘ಕ್ರಿಶ್ 3’ ಸರಣಿಯಲ್ಲಿ ಹೃತಿಕ್ಗೆ ಜೊತೆಯಾಗಿ ಪ್ರಿಯಾಂಕಾ ನಟಿಸಿದ್ದರು. ಈಗ ಹಲವು ವರ್ಷಗಳ ಬಳಿಕ ಮತ್ತೆ ‘ಕ್ರಿಶ್ 4’ ಸಿನಿಮಾದಲ್ಲಿ ಹೃತಿಕ್ಗೆ ಜೋಡಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.