ಕೊಪ್ಪಳ ಮೇ 09 (ಕ.ವಾ.): ಕರ್ನಾಟಕ ವಿಧಾನಸಭೆ ಚುನಾವಣೆ ನಿಮಿತ್ತ ಮೇ 8ರ ಸಂಜೆ 6 ಗಂಟೆಯಿಂದಲೇ ಜಿಲ್ಲೆಯಾದ್ಯಂತ 144 ಕಲಂ ರಡಿ ನಿ಼ಷೇಧಾಜ್ಞೆ ಜಾರಿಯಿದ್ದು, ಮೇ 10ರಂದು ಮತದಾನ ನಡೆಯುವ ಮತಗಟ್ಟೆಗಳ ಸುತ್ತ 100 ಮೀಟರ್ ವ್ಯಾಪ್ತಿಯ ಒಳಗೆ ಚುನಾವಣೆ ಪ್ರಚಾರ ನಿಷೇಧಿಸಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.
ಎಲ್ಲಾ ಮತಗಟ್ಟೆ ಕೇಂದ್ರಗಳ ಸುತ್ತಲಿನ 100 ಮೀಟರ್ ವ್ಯಾಪ್ತಿಯ ಸ್ಥಳ ನಿರ್ಬಂಧಿತ ಪ್ರದೇಶವಾಗಿದ್ದು, ಈ ಪ್ರದೇಶದಲ್ಲಿ ಖಾಸಗಿ ವಾಹನಗಳ ನಿಲುಗಡೆ, ಧ್ವನಿವರ್ಧಕ ಬಳಕೆ ಮುಂತಾದವುಗಳನ್ನು ನಿಷೇಧಿಸಿದೆ ಹಾಗೂ ಮತಗಟ್ಟೆ ಕೇಂದ್ರಗಳ 100 ಮೀಟರ್ ವ್ಯಾಪ್ತಿಯಲ್ಲಿ ಪಕ್ಷದ ಪ್ರಚಾರ, ಮತದ ಓಲೈಕೆ ಮುಂತಾದವುಗಳನ್ನು ಮಾಡುವಂತಿಲ್ಲ ಮತ್ತು ಈ ಸ್ಥಳದಲ್ಲಿ ಬಹಿರಂಗವಾಗಿ ಘೋಷಣೆ ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು ಸನ್ನೆ ಅಥವಾ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಆಕ್ರಮಿಸಬಹುದಾದ ಕೃತ್ಯಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.